
ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ; 148 ಪ್ರಯಾಣಿಕರು ಸುರಕ್ಷಿತ
ವಿಶಾಖಪಟ್ಟಣಂನಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ IX2065 ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ತಾಂತ್ರಿಕ ಸಮಸ್ಯೆಯ ಹಿನ್ನೆಲೆಯಲ್ಲಿ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದ್ದು, 148 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.
ವಿಶಾಖಪಟ್ಟಣಂನಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಇದ್ರಿಂದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, 148 ಪ್ರಯಾಣಿಕರಿದ್ದ ವಿಮಾನವನ್ನ ತುರ್ತು ಲ್ಯಾಂಡಿಂಗ್ ಮಾಡಿದ್ದು, ಎಲ್ಲಾ ಪ್ರಯಾಣಿಕರು ಸೇಫ್ ಆಗಿದ್ದಾರೆ ಎಂದು ಮಾಹಿತಿ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ IX2065 ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದರೂ, ಯಾವುದೇ ಅನಾಹುತ ಸಂಭವಿಸದಂತೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
IX2065 ವಿಮಾನಕ್ಕೆ ಹಕ್ಕಿ ಡಿಕ್ಕಿ
ವಿಮಾನಕ್ಕೆ ಹಕ್ಕಿ ಡಿಕ್ಕಿಯಾದ ಹಿನ್ನೆಲೆ ತುರ್ತು ಲ್ಯಾಂಡಿಂಗ್ ಆದ ಏರ್ ಇಂಡಿಯಾ ವಿಮಾನ ವಿಶಾಖಪಟ್ಟಣಂನಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ IX2065 ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ದೇವನಹಳ್ಳಿಯ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ. 148 ಪ್ರಯಾಣಿಕರಿದ್ದ ವಿಮಾನ ತುರ್ತು ಲ್ಯಾಂಡಿಂಗ್ ಮಾಡಿದ್ದು ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

