ಹೋಟೆಲ್ಗಳಲ್ಲಿ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್! ಸರ್ಕಾರದಿಂದ ಹೊಸ ಆ್ಯಪ್
ಹೋಟೆಲ್, ರೆಸ್ಟೋರೆಂಟ್ ಹಾಗೂ ಆಹಾರ ತಯಾರಿಕಾ ಘಟಕಗಳಲ್ಲಿ ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನು ಮತ್ತೆ ಮತ್ತೆ ಬಳಸುವುದಕ್ಕೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮುಂದಾಗಿದೆ.
ಹೋಟೆಲ್, ರೆಸ್ಟೋರೆಂಟ್ ಹಾಗೂ ಆಹಾರ ತಯಾರಿಕಾ ಘಟಕಗಳಲ್ಲಿ ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನು ಮತ್ತೆ ಮತ್ತೆ ಬಳಸುವುದಕ್ಕೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮುಂದಾಗಿದೆ. ಆರೋಗ್ಯ ಇಲಾಖೆಯು ಈ ನಿಟ್ಟಿನಲ್ಲಿ ಮುಂದಿನ 3 ತಿಂಗಳೊಳಗೆ ವಿಶೇಷ ಟ್ರೇಸಬಿಲಿಟಿ ಆ್ಯಪ್ (Traceability App) ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಬೆಂಗಳೂರು, ಮಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿ ನಗರಗಳಲ್ಲಿ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದ್ದು, ಬಳಿಕ ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಈ ಆ್ಯಪ್ ಮೂಲಕ ಬಳಕೆಯಾದ ಅಡುಗೆ ಎಣ್ಣೆಯ ಸಂಗ್ರಹಣೆ, ಸಾಗಣೆ ಮತ್ತು ವಿಲೇವಾರಿಯ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲಾಗುತ್ತದೆ. ಸಂಗ್ರಹಿಸಿದ ಎಣ್ಣೆಯನ್ನು ಆಹಾರಕ್ಕೆ ಮರುಬಳಕೆ ಮಾಡದಂತೆ ತಡೆದು, ಬಯೋಡೀಸೆಲ್, ಸೋಪು ಹಾಗೂ ದೀಪದ ಎಣ್ಣೆ ತಯಾರಿಕೆಗೆ ಬಳಸಲು ಸರ್ಕಾರ ಉದ್ದೇಶಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
Next Story

