ಬಸವಣ್ಣನವರಿಗೆ ಅಪಮಾನ: ‘ಬಸವ ಮಂಟಪ’ ಪುಸ್ತಕದ ಹಿಂದಿರುವವರ ವಿರುದ್ಧ ಕಾನೂನು ಕ್ರಮ ಎಂದ ಸಿಎಂ ಡಿ.ಕೆ. ಶಿವಕುಮಾರ್
x

ದೆಹಲಿಯಲ್ಲಿಯೂ ಬಸವಣ್ಣನವರ ಪ್ರತಿಮೆ ಸ್ಥಾಪಿಸಲಾಗಿದ್ದು, ರಾಜ್ಯದ ಪ್ರತಿಯೊಂದು ಊರು, ಮನೆ, ಶಾಲೆ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಅವರ ಭಾವಚಿತ್ರ ಅಳವಡಿಸಿ ವಿಚಾರಗಳನ್ನು ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಶಿವಕುಮಾರ್ ವಿವರಿಸಿದರು.

ಬಸವಣ್ಣನವರಿಗೆ ಅಪಮಾನ: ‘ಬಸವ ಮಂಟಪ’ ಪುಸ್ತಕದ ಹಿಂದಿರುವವರ ವಿರುದ್ಧ ಕಾನೂನು ಕ್ರಮ ಎಂದ ಸಿಎಂ ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿಯೂ ಬಸವಣ್ಣನವರ ಪ್ರತಿಮೆ ಸ್ಥಾಪಿಸಲಾಗಿದ್ದು, ರಾಜ್ಯದ ಪ್ರತಿಯೊಂದು ಊರು, ಮನೆ, ಶಾಲೆ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಅವರ ಭಾವಚಿತ್ರ ಅಳವಡಿಸಿ ವಿಚಾರಗಳನ್ನು ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಶಿವಕುಮಾರ್ ವಿವರಿಸಿದರು.


ಬಸವಣ್ಣನವರಿಗೆ ಅಪಮಾನ ಮಾಡಿರುವ ‘ಬಸವ ಮಂಟಪ’ ಪುಸ್ತಕದ ಹಿಂದೆ ಯಾರೇ ಇದ್ದರೂ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಪುಸ್ತಕದ ಪ್ರತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಮಾರ್ಗದರ್ಶನ ನೀಡಲಾಗಿದೆ ಎಂದು ಹೇಳಿದರು. ಬಸವಣ್ಣನವರಿಗೆ ಅಪಮಾನವಾಗಿರುವುದು ಕರ್ನಾಟಕಕ್ಕೆ ದೊಡ್ಡ ಅಗೌರವದ ಸಂಗತಿಯಾಗಿದೆ. ಸರ್ಕಾರವು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಗೌರವಿಸುತ್ತಿದ್ದು, ಅವರ ಆಚಾರ-ವಿಚಾರ ಹಾಗೂ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಮುನ್ನಡೆಯುತ್ತಿದೆ. ಬಸವಣ್ಣನವರ ಹೆಜ್ಜೆ ಗುರುತುಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದರು.

ದೆಹಲಿಯಲ್ಲಿಯೂ ಬಸವಣ್ಣನವರ ಪ್ರತಿಮೆ ಸ್ಥಾಪಿಸಲಾಗಿದ್ದು, ರಾಜ್ಯದ ಪ್ರತಿಯೊಂದು ಊರು, ಮನೆ, ಶಾಲೆ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಅವರ ಭಾವಚಿತ್ರ ಅಳವಡಿಸಿ ವಿಚಾರಗಳನ್ನು ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಶಿವಕುಮಾರ್ ವಿವರಿಸಿದರು. ಜಾತಿ ವಿಚಾರವಾಗಿ ಸಮಾಜದಲ್ಲಿ ಪರಸ್ಪರ ವೈಷಮ್ಯ ಮೂಡಿಸುವ ಕೆಲಸವನ್ನು ಕೆಲವು ಮಾಧ್ಯಮಗಳು ಹಾಗೂ ಕಿಡಿಗೇಡಿಗಳು ಮಾಡುತ್ತಿದ್ದಾರೆ. ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಗಂಭೀರವಾಗಿ ಚರ್ಚಿಸಲಾಗಿದೆ. ಸಚಿವರಾದ ಈಶ್ವರ್ ಖಂಡ್ರೆ, ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಬಸವರಾಜ ರಾಯರೆಡ್ಡಿ, ಯತೀಂದ್ರ ಸಿದ್ದರಾಮಯ್ಯ, ಕೆ.ಎಚ್. ಮುನಿಯಪ್ಪ ಸೇರಿದಂತೆ ಇಡೀ ಸಚಿವ ಸಂಪುಟ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಲು ನಿರ್ಧರಿಸಿದೆ. ಬಸವ ಸಮಿತಿಯವರೂ ಈ ಸಂಬಂಧ ಪತ್ರ ಬರೆದಿದ್ದು, ಈ ವಿಚಾರವಾಗಿ ಇನ್ನಷ್ಟು ಸುದೀರ್ಘ ಚರ್ಚೆ ನಡೆಸಬೇಕಿದೆ ಎಂದು ತಿಳಿಸಿದರು. ವಿವಿಧ ಪಕ್ಷಗಳ ಮುಖಂಡರೂ ತಮ್ಮೊಂದಿಗೆ ಮಾತನಾಡಿದ್ದು, ರಾಜ್ಯದಲ್ಲಿ ಪ್ರತಿಭಟನೆಗಳು ನಡೆದು ಶಾಂತಿ ಭಂಗ ಉಂಟಾಗುವ ಸಾಧ್ಯತೆಗಳಿದ್ದ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿಯೇ ಕುಡಿಯುವ ನೀರಿಗೆ ಸಂಕಷ್ಟ: ಕಾವೇರಿ ವಿಚಾರದಲ್ಲಿ ಸಿಎಂ ಸ್ಪಷ್ಟನೆ

ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿರುವ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ನೀರಿದ್ದರೆ ಖಂಡಿತವಾಗಿಯೂ ತಮಿಳುನಾಡಿಗೆ ನೀರು ನೀಡುತ್ತೇವೆ. ಆದರೆ, ಪ್ರಸ್ತುತ ನಮ್ಮ ರಾಜ್ಯದಲ್ಲಿಯೇ ಕುಡಿಯಲು ನೀರಿಲ್ಲದ ಪರಿಸ್ಥಿತಿ ಇದೆ. ರಾಜ್ಯದ ಹಿತಾಸಕ್ತಿ ಹಾಗೂ ರೈತರನ್ನು ರಕ್ಷಿಸುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು.

ಪರಿಸ್ಥಿತಿಯ ಗಂಭೀರತೆಯನ್ನು ರಾಜ್ಯದ ರೈತರಿಗೆ ತಿಳಿಸಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಈ ವರ್ಷ ಕಾವೇರಿಗೆ ಬಾಗಿನ ಅರ್ಪಿಸಲೂ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಎಷ್ಟು ನೀರಿದೆ ಎಂಬ ವಾಸ್ತವಾಂಶ ತಮಿಳುನಾಡಿನವರಿಗೂ, ನಮಗೂ ಹಾಗೂ ಇಡೀ ಜಗತ್ತಿಗೂ ತಿಳಿದಿದೆ. ಸುಪ್ರೀಂಕೋರ್ಟ್‌ನಲ್ಲಿ ತಮಿಳುನಾಡಿನ ಅರ್ಜಿ ವಜಾಗೊಂಡಿರುವುದು ವಾಸ್ತವಾಂಶವಾಗಿದ್ದು, ನ್ಯಾಯಾಲಯದ ಆದೇಶದಲ್ಲಿರುವ ಅಂಶಗಳನ್ನು ಪಕ್ಷದ ಅಧ್ಯಕ್ಷರಿಗೂ ತಿಳಿಸುತ್ತಿರುವುದಾಗಿ ಅವರು ಹೇಳಿದರು.

224 ಶಾಸಕರಿಗೂ ಮುಖ್ಯಮಂತ್ರಿ: ‘ಗಂಗಾ’ ನಿವಾಸದ ಔತಣಕೂಟದ ಬಗ್ಗೆ ಹೇಳಿಕೆ

ಹಿರಿಯೂರು ಚುನಾವಣೆಯ ವಿಚಾರವಾಗಿ ಸಚಿವರೊಂದಿಗೆ ಸಭೆ ನಡೆಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಎಲ್ಲಾ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದರು. ಹೊಸ ನಿವಾಸ ‘ಗಂಗಾ’ಕ್ಕೆ ಬಂದ ಹಿನ್ನೆಲೆಯಲ್ಲಿ ನಿನ್ನೆ ಎಲ್ಲರಿಗೂ ಊಟಕ್ಕೆ ಆಹ್ವಾನ ನೀಡಲಾಗಿತ್ತು. ತಾವು ರಾಜ್ಯದ 224 ಶಾಸಕರಿಗೂ ಮುಖ್ಯಮಂತ್ರಿಯಾಗಿದ್ದು, ಆ ಕಾರಣಕ್ಕಾಗಿಯೇ ಎಲ್ಲಾ ಪಕ್ಷದ ಶಾಸಕರನ್ನೂ ಆಹ್ವಾನಿಸಿದ್ದಾಗಿ ಅವರು ಸ್ಪಷ್ಟಪಡಿಸಿದರು.

Read More
Next Story