Siddaramaiah clarifies that more grants were given to the Kuruba community and no discrimination was made against other castes.
x

ಮಾಜಿ ಸಿಎಂ ಸಿದ್ದರಾಮಯ್ಯ

ವಿಧಾನಸೌಧದಲ್ಲಿಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಲಾಖೆಗಳ ಮಹತ್ವದ ಪ್ರಗತಿ ಪರಿಶೀಲನಾ ಸಭೆ

ರಾಜ್ಯದಲ್ಲಿ ನಡೆಯುತ್ತಿರುವ ಬೃಹತ್ ಮೂಲಭೂತ ಸೌಕರ್ಯ ಕಾಮಗಾರಿಗಳ ತ್ವರಿತ ಅನುಷ್ಠಾನದ ಕುರಿತು ಅವಲೋಕನ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿರುವ ಇತರ ಪ್ರಮುಖ ಆಡಳಿತಾತ್ಮಕ ಮತ್ತು ಅಭಿವೃದ್ಧಿ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.


Click the Play button to hear this message in audio format

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಸರ್ಕಾರದ ಪ್ರಮುಖ ಯೋಜನೆಗಳ ಅನುಷ್ಠಾನ ಮತ್ತು ಬಜೆಟ್ ಘೋಷಣೆಗಳ ವಾಸ್ತವ ಸ್ಥಿತಿಯನ್ನು ಅವಲೋಕಿಸಲು ಈ ಸಭೆಯನ್ನು ಕರೆಯಲಾಗಿದೆ.

ಈ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳುವಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ (CS) ಶಾಲಿನಿ ರಜನೀಶ್ ಅವರು ಕಡ್ಡಾಯ ಸೂಚನೆ ನೀಡಿದ್ದಾರೆ.

ಸಭೆಯ ಪ್ರಮುಖ ಅಜೆಂಡಾಗಳೇನು?

2025-26ನೇ ಸಾಲಿನ ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಮುಂಬರುವ 2026-27ನೇ ಸಾಲಿನ ಆಯವ್ಯಯ (ಬಜೆಟ್) ಕಂಡಿಕೆಗಳ ಅನುಷ್ಠಾನದ ಕುರಿತು ಚರ್ಚೆ ನಡೆಯಲಿದ್ದು, ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (PPP) ಕೈಗೊಳ್ಳಲಾಗುತ್ತಿರುವ ಯೋಜನೆಗಳ ಪ್ರಸ್ತುತ ಹಂತ ಮತ್ತು ವಿಳಂಬವಾಗಿದ್ದರೆ ಅದರ ಕಾರಣಗಳ ಪರಿಶೀಲನ ನಡೆಯಲಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಬೃಹತ್ ಮೂಲಭೂತ ಸೌಕರ್ಯ ಕಾಮಗಾರಿಗಳ ತ್ವರಿತ ಅನುಷ್ಠಾನದ ಕುರಿತು ಅವಲೋಕನ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿರುವ ಇತರ ಪ್ರಮುಖ ಆಡಳಿತಾತ್ಮಕ ಮತ್ತು ಅಭಿವೃದ್ಧಿ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಈ ಸಭೆಯಲ್ಲಿ ಯಾವುದೇ ರೀತಿಯ ನೆಪಗಳನ್ನು ಹೇಳದೆ, ತಮ್ಮ ಇಲಾಖೆಗೆ ಸಂಬಂಧಿಸಿದ ಅಗತ್ಯ ಪೂರಕ ಮಾಹಿತಿ ಹಾಗೂ ನಿಖರವಾದ ದಾಖಲೆಗಳೊಂದಿಗೆ ತಪ್ಪದೇ ಹಾಜರಾಗುವಂತೆ ಎಲ್ಲಾ ಉನ್ನತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ರವಾನಿಸಲಾಗಿದೆ. ಸಭೆಯಲ್ಲಿ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳ ವೇಗವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಿಎಂ ಕಠಿಣ ಸೂಚನೆಗಳನ್ನು ನೀಡುವ ನಿರೀಕ್ಷೆಯಿದೆ.

Read More
Next Story