Contaminated water problem in Indore: Number of people dying from diarrhea increases; officials scramble to find source
x

ಸಾಂದರ್ಭಿಕ ಚಿತ್ರ

ಮಂಗಳೂರು ಪಾಲಿಕೆ ನಿರ್ಲಕ್ಷ್ಯ; ಕಲುಷಿತ ನೀರು ಕುಡಿದು ನೂರಕ್ಕೂ ಹೆಚ್ಚು ಜನರಿಗೆ ವಾಂತಿಬೇಧಿ

ಅನಾರೋಗ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಸ್ಥಳೀಯ ನಾಗರಿಕರು, ಆರೋಗ್ಯ ಇಲಾಖೆ ನೀರಿನ ಗುಣಮಟ್ಟದ ಪರೀಕ್ಷೆ ನಡೆಸಿವೆ. ಆಗ ಲ್ಯಾಬ್ ವರದಿಯಲ್ಲಿ ಕಂಡು ಬಂದ ಸಂಗತಿ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ.


ಮಂಗಳೂರು ಮಹಾನಗರ ಪಾಲಿಕೆ ಸರಬರಾಜು ಮಾಡಿದ ಕಲುಷಿತ ನೀರು ಸೇವಿಸಿದ ಪರಿಣಾಮ ನೂರಕ್ಕೂ ಹೆಚ್ಚು ಜನರಿಗೆ ವಾಂತಿಬೇಧಿ ಕಾಣಿಸಿಕೊಂಡಿದೆ. ನಗರದ ಹೃದಯಭಾಗದ ಬಿಜೈ ನ್ಯೂ ರೋಡ್ ಹಾಗೂ ಬಟ್ಟಗುಡ್ಡೆ ಭಾಗದಲ್ಲಿ ಕಳೆದ ಮೂರ್ನಾಲ್ಕು ವಾರಗಳಿಂದ ಟ್ಯಾಪ್‌ಗಳಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿದೆ. ಈ ಕಲುಷಿತ ನೀರನ್ನು ಬಳಸಿದ ಪರಿಣಾಮ ಬಡಾವಣೆಯ ಹಿರಿಯ ನಾಗರಿಕರು ಮತ್ತು ಮಕ್ಕಳು ವಾಂತಿ-ಭೇದಿಯಿಂದ ಬಳಲುತ್ತಿದ್ದಾರೆ.

ಆರಂಭದಲ್ಲಿ ಇದು ಸಾಮಾನ್ಯ ಸೋಂಕು ಇರಬಹುದು ಎಂದುಕೊಂಡಿದ್ದ ಜನರಿಗೆ ಇಡೀ ಬಡಾವಣೆಯ ನೂರಕ್ಕೂ ಹೆಚ್ಚು ಮನೆಗಳಲ್ಲಿ ಇದೇ ಪರಿಸ್ಥಿತಿ ಇರುವುದು ಕಂಡುಬಂದಾಗ ಆತಂಕ ಮೂಡಿದೆ. ಅನೇಕರು ವೈದ್ಯರ ಬಳಿ ಹೋಗಿ ಆ್ಯಂಟಿಬಯೋಟಿಕ್ ಮಾತ್ರೆ ತೆಗೆದುಕೊಂಡರೂ ಆರೋಗ್ಯ ನಿಯಂತ್ರಣಕ್ಕೆ ಬಾರದೆ ಸುಸ್ತಾಗಿದ್ದಾರೆ. ಅನೇಕರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಲ್ಯಾಬ್ ವರದಿ ನೋಡಿ ಬೆಚ್ಚಿಬಿದ್ದ ನಿವಾಸಿಗಳು

ಅನಾರೋಗ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಸ್ಥಳೀಯ ನಾಗರಿಕರು, ಆರೋಗ್ಯ ಇಲಾಖೆ ಮೂಲಕ ನೀರಿನ ಗುಣಮಟ್ಟದ ಪರೀಕ್ಷೆ ನಡೆಸಿದ್ದಾರೆ. ಆದರೆ, ಲ್ಯಾಬ್ ವರದಿಯಲ್ಲಿ ಕಂಡು ಬಂದ ಸಂಗತಿ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಪಾಲಿಕೆ ಸರಬರಾಜು ಮಾಡುತ್ತಿರುವ ಈ ನೀರು ಕುಡಿಯಲು ಯಾವುದೇ ಕಾರಣಕ್ಕೂ ಯೋಗ್ಯವಲ್ಲ ಎಂದು ಪ್ರಯೋಗಾಲಯದ ವರದಿಯಲ್ಲಿ ದೃಢಪಟ್ಟಿದೆ.

ಪ್ರಯೋಗಾಲಯದ ವರದಿ ಕೈ ಸೇರುತ್ತಿದ್ದಂತೆ ಕಂಗಾಲಾಗಿರುವ ಬಿಜೈ ನಿವಾಸಿಗಳು, ಸದ್ಯ ಪಾಲಿಕೆ ಸರಬರಾಜು ಮಾಡುವ ನೀರು ಬಳಸುವುದನ್ನು ಸಂಪೂರ್ಣವಾಗಿ ನಿಲ್ಲಿಸಿದ್ದು, ಅನಿವಾರ್ಯವಾಗಿ ದುಬಾರಿ ಹಣ ಕೊಟ್ಟು ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಖರೀದಿಸಿ ದಿನನಿತ್ಯದ ಬಳಕೆಗೆ ಬಳಸುತ್ತಿದ್ದಾರೆ.

ನಗರದ ಹಲವೆಡೆ ಕುಡಿಯುವ ನೀರಿನ ಪೈಪ್‌ಲೈನ್‌ ಹಾಗೂ ಒಳಚರಂಡಿ ಪೈಪ್‌ಲೈನ್‌ಗಳನ್ನು ಪಕ್ಕಪಕ್ಕದಲ್ಲೇ ಅಳವಡಿಸಲಾಗಿದೆ. ಇತ್ತೀಚೆಗೆ ನಡೆದ ಯಾವುದೋ ರಸ್ತೆ ಅಥವಾ ದುರಸ್ತಿ ಕಾಮಗಾರಿಗಳ ವೇಳೆ ಜೆಸಿಬಿ ತಗುಲಿ ಅಥವಾ ಪೈಪ್‌ಗಳು ಒಡೆದು ಹೋಗಿ, ಡ್ರೈನೇಜ್ ನೀರು ನೇರವಾಗಿ ಕುಡಿಯುವ ನೀರಿನ ಪೈಪ್‌ಲೈನ್‌ಗೆ ತೂರಿ ಮಿಶ್ರಣವಾಗಿರುವ ಸಂಶಯ ವ್ಯಕ್ತವಾಗಿದೆ. ಈ ಬಗ್ಗೆ ಪಾಲಿಕೆಯ ತಾಂತ್ರಿಕ ಎಂಜಿನಿಯರ್‌ಗಳು ತಕ್ಷಣವೇ ಪರಿಶೀಲನೆ ನಡೆಸಿ ಲೀಕೇಜ್ ಪತ್ತೆ ಹಚ್ಚಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Read More
Next Story