ಎಸ್‌ಐಆರ್ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನಿಲುವು? ಕೇರಳದಲ್ಲಿ ಮೆಚ್ಚುಗೆ, ಮಹಾರಾಷ್ಟ್ರದಲ್ಲಿ ವಿರೋಧ
ಎಸ್‌ಐಆರ್ ವಿಚಾರದಲ್ಲಿ ಕೇರಳದಲ್ಲಿ ಮೆಚ್ಚುಗೆ, ಕರ್ನಾಟಕದಲ್ಲಿ ನಿಲುವು ಬದಲಾವಣೆ, ಮಹಾರಾಷ್ಟ್ರದಲ್ಲಿ ವಿರೋಧ ವ್ಯಕ್ತವಾಗಿದೆ. ಕಾಂಗ್ರೆಸ್‌ನ ವಿಭಿನ್ನ ನಿಲುವು ರಾಜಕೀಯ ಚರ್ಚೆಗೆ ಕಾರಣವಾಗಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರ ಇದೀಗ ದೇಶದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಎಸ್‌ಐಆರ್ ಮೂಲಕ ನಕಲಿ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂಬ ವಾದ ಒಂದು ಕಡೆಯಾದರೆ, ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಅರ್ಹ ಮತದಾರರ ಹಕ್ಕುಗಳ ಬಗ್ಗೆ ಪ್ರತಿಪಕ್ಷಗಳು ಆತಂಕ ವ್ಯಕ್ತಪಡಿಸುತ್ತಿವೆ. ಕರ್ನಾಟಕದ ಕಾಂಗ್ರೆಸ್ ಸಚಿವರೊಬ್ಬರು ಆರಂಭದಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ಬೆಂಬಲಿಸಿ ಮಾತನಾಡಿದ್ದರು. ಆದರೆ ನಂತರ ಪಕ್ಷದೊಳಗಿನ ಒತ್ತಡದ ಹಿನ್ನೆಲೆಯಲ್ಲಿ ತಮ್ಮ ನಿಲುವು ಬದಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನೊಂದೆಡೆ, ಕೇರಳದ ಕಾಂಗ್ರೆಸ್ ನಾಯಕರೊಬ್ಬರು ಎಸ್‌ಐಆರ್ ಮೂಲಕ ಸುಮಾರು ಒಂದು ಕೋಟಿ ನಕಲಿ ಮತದಾರರನ್ನು ತೆಗೆದುಹಾಕಲಾಗಿದೆ ಎಂದು ಒಪ್ಪಿಕೊಂಡಿದ್ದಾರೆ ಎಂಬ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಇದೇ ಪ್ರಕ್ರಿಯೆಯನ್ನು ಕಾಂಗ್ರೆಸ್ ಪ್ರಶ್ನಿಸುತ್ತಿದೆ.
ಕೇರಳದಲ್ಲಿ ಮೆಚ್ಚುಗೆ, ಕರ್ನಾಟಕದಲ್ಲಿ ನಿಲುವು ಬದಲಾವಣೆ, ಮಹಾರಾಷ್ಟ್ರದಲ್ಲಿ ವಿರೋಧ! ಚುನಾವಣಾ ಸುಧಾರಣೆಗಳ ವಿಚಾರದಲ್ಲಿ ಕಾಂಗ್ರೆಸ್‌ನ ನಿಲುವು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತಿದೆಯೇ?

