CEC ವಿರುದ್ಧ ಎಂ.ಬಿ. ಪಾಟೀಲ್ ಕಿಡಿ
ವಿಜಯಪುರದಲ್ಲಿ ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟಿಸಿ, ಎಸ್ಐಆರ್ ಹಾಗೂ ಮತದಾರರ ಪಟ್ಟಿ ಕುರಿತು ಆಕ್ಷೇಪ ವ್ಯಕ್ತಪಡಿಸಿದರು.
ವಿಜಯಪುರದಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿದರು. ಎಸ್ಐಆರ್ ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿ, ಜ್ಞಾನೇಶ್ ಕುಮಾರ್ ಅವರನ್ನು ಸ್ಥಾನದಿಂದ ತೆಗೆದುಹಾಕುವಂತೆ ಒತ್ತಾಯಿಸಲಾಯಿತು. ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಎಂ.ಬಿ. ಪಾಟೀಲ್ ಅವರು ವಿಜಯಪುರ ಜಿಲ್ಲೆಯಲ್ಲಿ ಅರ್ಹ ಮತದಾರರ ಹೆಸರನ್ನು ತೆಗೆದುಹಾಕಲು ಸಾಮೂಹಿಕ ಆಕ್ಷೇಪಣೆ ಸಲ್ಲಿಸಿರುವ ಆರೋಪಗಳನ್ನೂ ಪ್ರಸ್ತಾಪಿಸಿದ್ದಾರೆ. ಈ ಆರೋಪಗಳ ಕುರಿತು ಕಾನೂನು ಕ್ರಮದ ಸಾಧ್ಯತೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
Next Story

