ಅಕ್ವಾನ್ ಚಂಡಮಾರುತ ಎಫೆಕ್ಟ್: ಆಂಧ್ರಕ್ಕೆ ಅಪ್ಪಳಿಸುವ ಸಾಧ್ಯತೆ, ಬೆಂಗಳೂರಲ್ಲೂ ಮಳೆ ಮುನ್ಸೂಚನೆ
x

ಅಕ್ವಾನ್ ಚಂಡಮಾರುತ ಎಫೆಕ್ಟ್: ಆಂಧ್ರಕ್ಕೆ ಅಪ್ಪಳಿಸುವ ಸಾಧ್ಯತೆ, ಬೆಂಗಳೂರಲ್ಲೂ ಮಳೆ ಮುನ್ಸೂಚನೆ

ಅಕ್ವಾನ್ ಚಂಡಮಾರುತದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಶುಕ್ರವಾರ ಮಧ್ಯಾಹ್ನ ಆಂಧ್ರಪ್ರದೇಶದ ನರಸಾಪುರ ಮತ್ತು ಒಡಿಶಾದ ಪುರಿ ನಡುವಿನ ಕರಾವಳಿ ಪ್ರದೇಶಕ್ಕೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ.


ಬಂಗಾಳ ಕೊಲ್ಲಿಯಲ್ಲಿ ಅಕ್ವಾನ್ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ನವೆಂಬರ್ 20ರಂದು ಆಂಧ್ರ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ. ಇದರ ಪರಿಣಾಮ ಬೆಂಗಳೂರಿನಲ್ಲೂ ಮಳೆಯಾಗುವ ಮುನ್ಸೂಚನೆ ಇದೆ. ಹಲವು ರಾಜ್ಯಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಗುವ ಸಾಧ್ಯತೆಯಿದೆ. ನವೆಂಬರ್ 20ರಂದು ಆಂಧ್ರಪ್ರದೇಶದ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ನಿರೀಕ್ಷೆಯಿದ್ದು, ಇದರ ಪರಿಣಾಮ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಅಕ್ವಾನ್ ಚಂಡಮಾರುತದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಶುಕ್ರವಾರ ಮಧ್ಯಾಹ್ನ ಆಂಧ್ರಪ್ರದೇಶದ ನರಸಾಪುರ ಮತ್ತು ಒಡಿಶಾದ ಪುರಿ ನಡುವಿನ ಕರಾವಳಿ ಪ್ರದೇಶಕ್ಕೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 90ರಿಂದ 100 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದ್ದು, ಗಾಳಿಯ ವೇಗ 110 ಕಿ.ಮೀ. ತಲುಪುವ ಸಾಧ್ಯತೆಯೂ ಇದೆ.

ಒಡಿಶಾದ 13 ಜಿಲ್ಲೆಗಳಿಗೆ ರೆಡ್ ಅಲರ್ಟ್

ಚಂಡಮಾರುತದ ಪರಿಣಾಮ ಒಡಿಶಾದ 13 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಆರು ಜಿಲ್ಲೆಗಳಲ್ಲಿ ನವೆಂಬರ್ 19ರಿಂದ 21ರವರೆಗೆ ಶಾಲಾ-ಕಾಲೇಜುಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಕರಾವಳಿ ಭಾಗಗಳಲ್ಲಿ ಸ್ಥಳೀಯ ಆಡಳಿತ ಕಟ್ಟೆಚ್ಚರ ವಹಿಸಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ಆಂಧ್ರ, ತೆಲಂಗಾಣದಲ್ಲಿ ಭಾರೀ ಮಳೆ ಮುನ್ಸೂಚನೆ

ನವೆಂಬರ್ 19 ಮತ್ತು 20ರಂದು ಕರಾವಳಿ ಆಂಧ್ರಪ್ರದೇಶದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಯಲಸೀಮೆಯ ಕೆಲವು ಭಾಗಗಳಲ್ಲೂ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ನವೆಂಬರ್ 20 ಮತ್ತು 21ರಂದು ಪೂರ್ವ ತೆಲಂಗಾಣದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಬೆಂಗಳೂರಿಗೂ ಅಕ್ವಾನ್ ಎಫೆಕ್ಟ್!

ಅಕ್ವಾನ್ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೂ ಬೀರುವ ಸಾಧ್ಯತೆಯಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಹವಾಮಾನದಲ್ಲಿ ಬದಲಾವಣೆಯಾಗುವ ನಿರೀಕ್ಷೆಯಿದೆ. ಹೀಗಾಗಿ ನಗರದ ಜನರು ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ.ಇನ್ನು ಚಂಡಮಾರುತದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆಯೂ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದು, ಮೂರು ರೈಲುಗಳ ಸಂಚಾರ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಒಟ್ಟಿನಲ್ಲಿ ಅಕ್ವಾನ್ ಚಂಡಮಾರುತದ ಪರಿಣಾಮ ಆಂಧ್ರಪ್ರದೇಶ, ಒಡಿಶಾ, ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ಹವಾಮಾನ ಪರಿಸ್ಥಿತಿ ಬದಲಾಗುವ ಸಾಧ್ಯತೆಯಿದೆ.

Read More
Next Story