ದರ್ಶನ್‌ಗೆ ಆಸ್ಪತ್ರೆ ಭಾಗ್ಯವಿಲ್ಲವೇ? ಜೈಲಿನಲ್ಲೇ ಬೆನ್ನುನೋವಿಗೆ ಚಿಕಿತ್ಸೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಮತ್ತೊಂದು ಹಿನ್ನಡೆಯಾಗಿದೆ. ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ದರ್ಶನ್, ತಮ್ಮನ್ನು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಮನವಿ ಮಾಡಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಮತ್ತೊಂದು ಹಿನ್ನಡೆಯಾಗಿದೆ. ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ದರ್ಶನ್, ತಮ್ಮನ್ನು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಮನವಿ ಮಾಡಿದ್ದರು. ಆದರೆ ಸದ್ಯಕ್ಕೆ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲು ಜೈಲಾಧಿಕಾರಿಗಳು ನಿರ್ಧರಿಸಿಲ್ಲ ಎನ್ನಲಾಗಿದೆ.
ಬದಲಿಗೆ, ವಿಕ್ಟೋರಿಯಾ ಆಸ್ಪತ್ರೆಯ ಫಿಸಿಯೋಥೆರಪಿ ತಜ್ಞರನ್ನೇ ಪರಪ್ಪನ ಅಗ್ರಹಾರ ಜೈಲಿಗೆ ಕರೆಸಿ ಚಿಕಿತ್ಸೆ ನೀಡಲು ಸಿದ್ಧತೆ ನಡೆಸಲಾಗಿದೆ. ಅಗತ್ಯ ಯಂತ್ರೋಪಕರಣಗಳೊಂದಿಗೆ ವೈದ್ಯರು ಜೈಲಿಗೆ ಭೇಟಿ ನೀಡಿ ದರ್ಶನ್ ಅವರ ಆರೋಗ್ಯ ತಪಾಸಣೆ ನಡೆಸಲಿದ್ದಾರೆ.
ಇನ್ನು, 59ನೇ ಸಿಸಿಹೆಚ್ ನ್ಯಾಯಾಲಯದ ನಿರ್ದೇಶನದಂತೆ ಅಗತ್ಯವಿದ್ದರೆ ಮಾತ್ರ ಆಸ್ಪತ್ರೆಗೆ ಸ್ಥಳಾಂತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಸೋಮವಾರ ಸರ್ಕಾರಿ ವಕೀಲರು ಆಕ್ಷೇಪಣೆ ಸಲ್ಲಿಸಿದ ಬಳಿಕ ಮುಂದಿನ ಬೆಳವಣಿಗೆ ಏನಾಗಲಿದೆ ಎಂಬುದು ಸ್ಪಷ್ಟವಾಗಲಿದೆ.
Next Story

