
ದೆಹಲಿಯಲ್ಲಿ ಭೀಕರ ರಸ್ತೆ ಅಪಘಾತ: ಕರ್ನಾಟಕದ ಬಿಜೆಪಿ ಶಾಸಕ ಅಭಯ ಪಾಟೀಲ ಸೇರಿ 6 ಮಂದಿಗೆ ಗಾಯ
ಇನೋವಾ ಕಾರಿನಲ್ಲಿ ದೆಹಲಿ ಶಾಸಕ ಅನಿಲ್ ಝಾ ಹಾಗೂ ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ್ ಪ್ರಯಾಣಿಸುತ್ತಿದ್ದರು. ಎದುರಿನಿಂದ ಬಂದ ಕಾರೊಂದು ಶಾಸಕರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಸೆಂಟ್ರಲ್ ದೆಹಲಿಯ ಲೋಕೋಪಯೋಗಿ ಇಲಾಖೆ (PWD) ಕಚೇರಿ ಬಳಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಬಿಜೆಪಿ ಶಾಸಕ ಅಭಯ ಪಾಟೀಲ, ದೆಹಲಿ ಶಾಸಕ ಅನಿಲ್ ಝಾ ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ.
#WATCH | Delhi: A road accident took place at the ITO traffic signal in Delhi, in front of the old Police Headquarters, after an out-of-control car crashed through the divider. More details awaited.
— ANI (@ANI) August 23, 2026
(Note: Graphic Visuals) pic.twitter.com/IMmGmKciu2
ಭಾನುವಾರ ರಾತ್ರಿ ಸುಮಾರು 9.30ರ ವೇಳೆಗೆ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಲಕ್ಷ್ಮಿನಗರದಿಂದ ಐಟಿಒ ಕಡೆಗೆ ತೆರಳುತ್ತಿದ್ದ 32 ವರ್ಷದ ಅಶುತೋಷ್ ಪಾಂಡೆ ಎಂಬಾತ ಚಲಾಯಿಸುತ್ತಿದ್ದ ಕಾರು ಮೊದಲು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಎದುರಿನಿಂದ ಬರುತ್ತಿದ್ದ ಇನೋವಾ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನೋವಾ ಕಾರಿನಲ್ಲಿ ದೆಹಲಿ ಶಾಸಕ ಅನಿಲ್ ಝಾ ಹಾಗೂ ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಇಬ್ಬರು ಶಾಸಕರು ಸೇರಿದಂತೆ ಒಟ್ಟು ಆರು ಮಂದಿಗೆ ಗಾಯಗಳಾಗಿದ್ದು, ಅವರನ್ನು ಲೋಕನಾಯಕ ಜಯಪ್ರಕಾಶ್ ನಾರಾಯಣ (LNJP) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
#WATCH | Delhi: Delhi Police Crime Team reaches the accident spot at ITO where an out-of-control car hit the divider, crossed the railing, and collided head-on with another car carrying Kirari MLA Anil Jha and Karnataka MLA Abhay Patil.
— ANI (@ANI) August 23, 2026
As per Delhi Police, all persons involved… https://t.co/03Oc3fKShz pic.twitter.com/L1pvSI37rv
ಗಾಯಗೊಂಡಿರುವ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ರಭಸಕ್ಕೆ ಎರಡೂ ಕಾರುಗಳು ಸಂಪೂರ್ಣ ಜಖಂಗೊಂಡಿವೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

