ಬರ ಘೋಷಣೆ, ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹ; ರೈತ ಸಂಘಟನೆಗಳಿಂದ ಕಲಬುರಗಿ ಬಂದ್‌ಗೆ ವ್ಯಾಪಕ ಬೆಂಬಲ
ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಹಾಗೂ ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ವಿವಿಧ ರೈತ ಸಂಘಟನೆಗಳು ಕಲಬುರಗಿ ಬಂದ್‌ಗೆ ಕರೆ ನೀಡಿವೆ.
ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಹಾಗೂ ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ವಿವಿಧ ರೈತ ಸಂಘಟನೆಗಳು ಕಲಬುರಗಿ ಬಂದ್‌ಗೆ ಕರೆ ನೀಡಿವೆ. ಅಖಿಲ ಭಾರತ ಕಿಸಾನ್ ಸಭೆ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸಿವೆ. ಅಸಮರ್ಪಕ ಮಳೆಯಿಂದ ಉಂಟಾದ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ, ರೈತರ ಸಾಲ ಮನ್ನಾ ಹಾಗೂ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ತರಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ. ಬಂದ್‌ಗೆ ಬೆಂಬಲ ಸೂಚಿಸಿ ಹಲವು ಅಂಗಡಿ-ಮುಂಗಟ್ಟುಗಳು ಮುಚ್ಚಲ್ಪಟ್ಟಿವೆ. ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.
Next Story

