ಸಾಕಷ್ಟು ಬಸ್‌ಗಳಿಲ್ಲದೆ ವಿದ್ಯಾರ್ಥಿಗಳ ಪರದಾಟ.. KSRTC, BMTC ಬಸ್‌ಗಳನ್ನು ತಡೆದು ಆಕ್ರೋಶ!
ದೇವನಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು KSRTC, BMTC ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಮುಖ್ಯ ರಸ್ತೆಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಶುಕ್ರವಾರ ಬೆಳಗ್ಗೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ದೇವನಹಳ್ಳಿ ಪಟ್ಟಣದ ಬಸ್ ನಿಲ್ದಾಣದಲ್ಲಿ KSRTC ಮತ್ತು BMTC ಬಸ್‌ಗಳನ್ನು ತಡೆದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಶಾಲಾ-ಕಾಲೇಜುಗಳಿಗೆ ತೆರಳಲು ಸಾಕಷ್ಟು ಬಸ್‌ಗಳಿಲ್ಲದೆ ಪ್ರತಿದಿನ ಸಮಸ್ಯೆ ಎದುರಿಸುತ್ತಿದ್ದೇವೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಯಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿ ನಿಯಂತ್ರಿಸಲು ಯತ್ನಿಸಿದ್ದಾರೆ. ದೇವನಹಳ್ಳಿಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸುಧಾರಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
Next Story

