BJP broke its promise in the Union Budget: DKSH demands Bhadra upper river grant
x

ಡಿಸಿಎಂ ಡಿ.ಕೆ. ಶಿವಕುಮಾರ್‌ 

ಕೆಪಿಎಸ್‌ಸಿ ಭ್ರಷ್ಟಾಚಾರ; ಕಾನೂನು ಚೌಕಟ್ಟಲ್ಲಿ ಸಂಸ್ಥೆ ಮುಚ್ಚುವ ಸರ್ಕಾರ ಚಿಂತನೆ

ಮಕ್ಕಳ ಭವಿಷ್ಯ ರೂಪಿಸಬೇಕಾದ ಆಯೋಗದಲ್ಲಿ ಖದೀಮರು ಸೇರಿಕೊಂಡಿದ್ದಾರೆ. ಎಷ್ಟೋ ನಂಬಿಕೆಯಿಂದ ಆಯ್ಕೆ ಮಾಡಿ ಕಳುಹಿಸಿದ ಸದಸ್ಯರು, ಆಯೋಗವನ್ನೇ ಅಂಗಡಿಯನ್ನಾಗಿ ಪರಿವರ್ತಿಸಿದ್ದಾರೆ ಎಂದು ಸಿಎಂ ಕಿಡಿಕಾರಿದ್ದಾರೆ.


Click the Play button to hear this message in audio format

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಇದೀಗ ಭ್ರಷ್ಟಾಚಾರದ ಕೂಪವಾಗಿ ಪರಿವರ್ತನೆಯಾಗಿದ್ದು, ಈ ಹಗರಣವನ್ನು ಕಾನೂನು ಚೌಕಟ್ಟಿನಲ್ಲಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಸರ್ಕಾರ ಬದ್ಧವಾಗಿದೆ. ಕಾನೂನು ಚೌಕಟ್ಟಿನಲ್ಲಿ ಸಂಸ್ಥೆಯನ್ನು ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು, ಕೆಪಿಎಸ್‌ಸಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮಕ್ಕಳ ಭವಿಷ್ಯ ರೂಪಿಸಬೇಕಾದ ಆಯೋಗದಲ್ಲಿ ಖದೀಮರು ಸೇರಿಕೊಂಡಿದ್ದಾರೆ. ನಾವು ಎಷ್ಟೋ ನಂಬಿಕೆಯಿಂದ ಆಯ್ಕೆ ಮಾಡಿ ಕಳುಹಿಸಿದ ಸದಸ್ಯರು, ಆಯೋಗವನ್ನೇ ಒಂದು ಅಂಗಡಿಯನ್ನಾಗಿ ಪರಿವರ್ತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಗರಣದ ತನಿಖೆ ಸಂಬಂಧ ಹೈಕೋರ್ಟ್ ತನಿಖಾಧಿಕಾರಿಗಳ ನೇಮಕದ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ವಾತಂತ್ರ್ಯವಿರಬೇಕಿತ್ತು. ನಮ್ಮ ಪೊಲೀಸ್ ಇಲಾಖೆಯು ಅತ್ಯಂತ ಸಮರ್ಥವಾಗಿ ತನಿಖೆಯನ್ನು ಮುಂದುವರಿಸಿತ್ತು. ನ್ಯಾಯಾಲಯವು ನಮ್ಮ ತನಿಖೆಯ ಉಸ್ತುವಾರಿಯನ್ನು ನೋಡಬಹುದಿತ್ತು. ಇಡಿ ಕೂಡ ತನಿಖೆ ಮಾಡುತ್ತಿದೆ ಎಂದು ಹೇಳಿದರು.

22 ಸಾವಿರ ಲೈನ್‌ಮ್ಯಾನ್‌ಗಳು ಮತ್ತು ಎಂಜಿನಿಯರ್‌ಗಳ ನೇಮಕವನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲಾಗಿದೆ. ಅದಕ್ಕೂ ಮೊದಲು ಖಾಲಿ ಪೇಪರ್‌ಗಳಲ್ಲಿ ಸಹಿ ಹಾಕಿಸಿಕೊಳ್ಳುವ ಭ್ರಷ್ಟ ಸಂಪ್ರದಾಯವಿತ್ತು, ನಾನು ಅದಕ್ಕೆ ಅವಕಾಶ ನೀಡಲಿಲ್ಲ ಎಂದು ತಮ್ಮ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಕೆಪಿಎಸ್‌ಸಿ ಸದಸ್ಯರ ಸಂಖ್ಯೆಯನ್ನು ಕಡಿತಗೊಳಿಸುವ ಮೂಲಕ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಪ್ರಯತ್ನಿಸಿದ್ದರು ಎಂದರು.

ಬರಗಾಲ - ವಿರೋಧ ಪಕ್ಷಗಳ ರಾಜಕೀಯ

ವಿರೋಧ ಪಕ್ಷಗಳು ಅಧಿವೇಶನದ ಸಮಯವನ್ನು ವ್ಯರ್ಥ ಮಾಡುತ್ತಿವೆ. ರೈತರ ಬದುಕಿನ ಬಗ್ಗೆ ಚರ್ಚಿಸಲು ಕರೆದ ವಿಶೇಷ ಅಧಿವೇಶನದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ನಾನು ಸ್ವತಃ ಪ್ರವಾಸ ಮಾಡಿ ಜನರ ಕಷ್ಟ ಅರಿತಿದ್ದೇನೆ. ರಾಜ್ಯದ 124 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ, ಇದು 200 ತಾಲೂಕುಗಳವರೆಗೂ ಏರಿಕೆಯಾಗುವ ಸಾಧ್ಯತೆಯಿದೆ ಎಂದರು. ಎಚ್.ಕೆ. ಪಾಟೀಲ್ ಅವರು ಗದಗವನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸದಿದ್ದರೆ ರಾಜೀನಾಮೆ ನೀಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿ, "ಮಲೆನಾಡಿನಲ್ಲೇ ಬರ ಬಂದಿದೆ ಎಂದರೆ ಗದಗದಲ್ಲಿ ಇರುವುದಿಲ್ಲವೇ? ಅವರ ಜಿಲ್ಲೆಯ ಸಮಸ್ಯೆಯ ಅರಿವು ನನಗಿದೆ. ಸರ್ಕಾರ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದೆ" ಎಂದು ಭರವಸೆ ನೀಡಿದರು.

ಹಣಕಾಸು ಸಚಿವನಾಗಿ ತಮಗೆ ಯಾವ ಯೋಜನೆಯನ್ನು ಮುಂದುವರಿಸಬೇಕು, ಯಾವುದನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕು ಎಂಬ ಅರಿವಿದೆ. "ಬೆಲೆ ಏರಿಕೆ ಮತ್ತು ಜನರ ಆದಾಯ ಕುಸಿತದ ಈ ಸಂದರ್ಭದಲ್ಲಿ 5 ಗ್ಯಾರಂಟಿ ಯೋಜನೆಗಳು ಬಡವರಿಗೆ ಆಧಾರವಾಗಿವೆ. ಈ ಮಧ್ಯೆಯೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಆದರೆ, ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ನೀಡುತ್ತಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆಯಾದ 5,300 ಕೋಟಿ ರೂಪಾಯಿಗಳನ್ನು ಮೊದಲು ಬಿಡುಗಡೆ ಮಾಡಲಿ" ಎಂದು ಕೇಂದ್ರಕ್ಕೆ ಸವಾಲು ಹಾಕಿದರು.

ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು

ಸಾಲ ಮನ್ನಾ ವಿಚಾರದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, "ಸಾಲ ಮನ್ನಾ ಮಾಡಿದ್ದು ನಮ್ಮ ಮತ್ತು ರಾಹುಲ್ ಗಾಂಧಿ ಅವರ ಬದ್ಧತೆ, ಕುಮಾರಸ್ವಾಮಿ ಅವರದ್ದಲ್ಲ. ಬಿಜೆಪಿ ಅಧಿಕಾರದಿಂದ ದೂರ ಇರಲಿ ಎಂಬ ಕಾರಣಕ್ಕೆ ನಾವು ಅವರಿಗೆ ಬೆಂಬಲ ಕೊಟ್ಟಿದ್ದೆವು. ಆ ಸರ್ಕಾರಕ್ಕೆ ಅಡಿಪಾಯ ಹಾಕಿದ್ದೇ ನಾವು" ಎಂದು ತಿರುಗೇಟು ನೀಡಿದರು. ಸೌಜನ್ಯ ಪ್ರಕರಣದ ಮರುತನಿಖೆಯ ಕುರಿತು ಪ್ರತಿಕ್ರಿಯಿಸಿ, ಈ ಬಗ್ಗೆ ಮಾಹಿತಿ ಪಡೆಯುತ್ತೇನೆ. ತನಿಖೆಯಲ್ಲಿ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ಕಾನೂನು ಪ್ರಕಾರ ಏನೇನು ನಡೆಯಬೇಕೋ ಅದು ನಡೆಯುತ್ತದೆ ಎಂದು ಸ್ಪಷ್ಟನೆ ನೀಡಿದರು.

Read More
Next Story