
ನೈಸ್ ಯೋಜನೆ; ಕಾನೂನಿನ ಚೌಕಟ್ಟಿನಲ್ಲೇ ಕ್ರಮ: ಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟನೆ
ನೈಸ್ ವಿಚಾರದಲ್ಲಿ ಕಾನೂನು ಬಿಟ್ಟು ಏನನ್ನೂ ಮಾಡುವುದಿಲ್ಲ. ಕಾನೂನು ಉಲ್ಲಂಘನೆಯಾಗಿದ್ದರೆ ಕೋರ್ಟ್ ಇದೆ, ಹೋರಾಟ ಮಾಡಲಿ" ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
"ನೈಸ್ ಯೋಜನೆ ಕುರಿತಂತೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಕಾನೂನು ಚೌಕಟ್ಟಿನಲ್ಲೇ ಕೈಗೊಳ್ಳಲಿದೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನೈಸ್ ಯೋಜನೆ ವಿಚಾರವಾಗಿ ರಾಜ್ಯ ಸರ್ಕಾರ ಕಾನೂನು ಉಲ್ಲಂಘಿಸಿ ಸಂಪುಟ ತೀರ್ಮಾನ ಕೈಗೊಂಡಿದೆ ಎಂದು ದೇವೇಗೌಡ ಅವರು ಹೇಳಿದ್ದಾರೆ. ಆದರೆ, ನಾವು ಏನು ಮಾಡಿದರೂ ಕಾನೂನು ಚೌಕಟ್ಟಿನಲ್ಲೇ ಮಾಡುತ್ತೇವೆ. ಕಾನೂನು ಅಭಿಪ್ರಾಯ ಪಡೆದುಕೊಳ್ಳುತ್ತೇವೆ. ಎಲ್ಲವನ್ನೂ ಮರುಪರಿಶೀಲನೆ ಮಾಡುತ್ತಿದ್ದೇವೆ. ಕಾನೂನು ಬಿಟ್ಟು ಏನನ್ನೂ ಮಾಡುವುದಿಲ್ಲ. ಕಾನೂನು ಉಲ್ಲಂಘನೆಯಾಗಿದ್ದರೆ ಕೋರ್ಟ್ ಇದೆ, ಹೋರಾಟ ಮಾಡಲಿ" ಎಂದು ತೀಕ್ಷ್ಣವಾಗಿ ತಿರುಗೇಟು ನೀಡಿದರು.
"ರೈತರು ಆಸ್ತಿ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿ. ಹಿಂದಿನ ಸರ್ಕಾರಗಳು ಒಪ್ಪಂದಗಳಿಗೆ ಸಹಿ ಮಾಡಿ ಕೊಟ್ಟಿವೆ. ರೈತರು ಆಸ್ತಿ ಕಳೆದುಕೊಂಡಿದ್ದಾರೆ, ಅವರನ್ನು ರಕ್ಷಣೆ ಮಾಡಬೇಕು. ನನಗೂ ಪ್ರಜ್ಞೆ ಇದೆ. ಮನುಷ್ಯ ವಿದ್ಯಾವಂತನಾಗಿರದಿದ್ದರೂ ಬುದ್ಧಿವಂತನಾಗಿರಬೇಕು, ಸಾಮಾನ್ಯ ಪ್ರಜ್ಞೆ ಇರಬೇಕು” ಎಂದು ತಿಳಿಸಿದರು.
ಇನ್ನಷ್ಟು ತಾಲ್ಲೂಕುಗಳಲ್ಲಿ ಬರ ಘೋಷಣೆ
ರಾಜ್ಯದಲ್ಲಿ ಭೀಕರ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಬರ ಘೋಷಣೆ ವಿಚಾರದಲ್ಲಿ ವೈಜ್ಞಾನಿಕ ಹಾಗೂ ತಾಂತ್ರಿಕ ವರದಿಗಳನ್ನು ಆಧರಿಸಿ 2–3 ಹಂತಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಹಾಗೂ ಇನ್ನೂ ಹಲವು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು. ಹಲವು ತಾಲ್ಲೂಕಿನಿಂದ ಬರದ ವರದಿಗಳು ಬರುತ್ತಿವೆ. ಇನ್ನೂ ಬಹಳ ತಾಲೂಕುಗಳು ಘೋಷಣೆಯಾಗುತ್ತವೆ. ಬಹಳ ಕಡೆ ಭೀಕರ ಬರ ಇದೆ. 21 ದಿನ ಮಳೆಯಾಗದ ಸ್ಥಳಗಳನ್ನು ಗುರುತಿಸಿ ತಾಂತ್ರಿಕ ವರದಿ ಆಧರಿಸಿ ತೀರ್ಮಾನ ಮಾಡಲಾಗುವುದು ಎಂದರು. ಶಾಸಕರು ಯಾರೂ ಆತಂಕ ಪಡಬೇಡಿ. ಎಲ್ಲೆಲ್ಲಿ ಬರ ಇದೆ ಎಂಬುದನ್ನು ವೈಜ್ಞಾನಿಕವಾಗಿ ನಿರ್ಧರಿಸಬೇಕು. ಉಪಮುಖ್ಯಮಂತ್ರಿ ವರದಿಗಳನ್ನು ತರಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ್ದೇವೆ. ಒಂದೇ ಸಲ ಎಲ್ಲವನ್ನೂ ಮಾಡಲು ಆಗುವುದಿಲ್ಲ. ಹಂತಗಳಲ್ಲಿ ಪ್ರಕ್ರಿಯೆ ನಡೆಯುತ್ತಿದೆ ಎಂದರು.

