ನ.15ರಂದು 319 KAS ಹುದ್ದೆಗಳ ಪರೀಕ್ಷೆ- ಅಕ್ರಮ ತಡೆಯಲು ಕೆಪಿಎಸ್‌ಸಿಯಿಂದ ಹೊಸ ಸುಧಾರಣೆ
ಕರ್ನಾಟಕ ಲೋಕಸೇವಾ ಆಯೋಗದ 319 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ನವೆಂಬರ್ 15ರಂದು ರಾಜ್ಯಾದ್ಯಂತ ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ಬಿಗಿ ಭದ್ರತೆ ಕೈಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗದ 319 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ನವೆಂಬರ್ 15ರಂದು ರಾಜ್ಯಾದ್ಯಂತ ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ಬಿಗಿ ಭದ್ರತೆ ಕೈಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಇಬ್ಬರು ಮೇಲ್ವಿಚಾರಕರು, ಸಿಸಿಟಿವಿ ಕ್ಯಾಮೆರಾ ಮತ್ತು ಮೊಬೈಲ್ ಜಾಮರ್ ಅಳವಡಿಕೆ ಸೇರಿದಂತೆ ಹಲವು ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ. ಪರೀಕ್ಷೆ ಮುಗಿದ ದಿನವೇ ಒಎಂಆರ್ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಗಳನ್ನು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ನಿರ್ಧರಿಸಲಾಗಿದೆ.
Next Story

