ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಪತ್ನಿ ಪ್ರಮೀಳಾ ಹೃದಯಾಘಾತದಿಂದ ನಿಧನ
x

ಪ್ರಮೀಳಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಇಂದು (ನವೆಂಬರ್ 20) ಬೆಳಗ್ಗೆ ಬೆಂಗಳೂರಿನ ವಿಜಯನಗರದಲ್ಲಿರುವ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಪತ್ನಿ ಪ್ರಮೀಳಾ ಹೃದಯಾಘಾತದಿಂದ ನಿಧನ

ಪ್ರಮೀಳಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಇಂದು (ನವೆಂಬರ್ 20) ಬೆಳಗ್ಗೆ ಬೆಂಗಳೂರಿನ ವಿಜಯನಗರದಲ್ಲಿರುವ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ.


Click the Play button to hear this message in audio format

ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಅವರ ಧರ್ಮಪತ್ನಿ ಪ್ರಮೀಳಾ ಅವರು ಗುರುವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಪ್ರಮೀಳಾ ಅವರ ನಿಧನದಿಂದ ಕುಟುಂಬಸ್ಥರು, ಬಂಧುಗಳು ಹಾಗೂ ಆಪ್ತ ವಲಯದಲ್ಲಿ ದುಃಖ ಆವರಿಸಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಬೀಗರಾಗಿದ್ದ ಪ್ರಮೀಳಾ ಅವರ ನಿಧನಕ್ಕೆ ಜೆಡಿಎಸ್ ನಾಯಕರು, ಗಣ್ಯರು ಹಾಗೂ ಕುಟುಂಬಸ್ಥರು ಸಂತಾಪ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ

ಪ್ರಮೀಳಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಇಂದು (ನವೆಂಬರ್ 20) ಬೆಳಗ್ಗೆ ಬೆಂಗಳೂರಿನ ವಿಜಯನಗರದಲ್ಲಿರುವ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು, ಅಭಿಮಾನಿಗಳು ಹಾಗೂ ಆಪ್ತರು ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

ಇಂದು ಸಂಜೆ 4 ಗಂಟೆಗೆ ಪ್ರಮೀಳಾ ಅವರ ಪಾರ್ಥಿವ ಶರೀರವನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುಟ್ಟೂರಾದ ದೊಡ್ಡರಸಿನಕೆರೆಗೆ ಕೊಂಡೊಯ್ಯಲಾಗುತ್ತದೆ. ಶನಿವಾರ ಬೆಳಗ್ಗೆ 11 ಗಂಟೆಯವರೆಗೆ ಗ್ರಾಮಸ್ಥರು ಹಾಗೂ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ನಂತರ ಕುಟುಂಬದ ಸಂಪ್ರದಾಯದಂತೆ ಸ್ವಗ್ರಾಮದಲ್ಲೇ ಅಂತ್ಯಕ್ರಿಯೆಯ ವಿಧಿವಿಧಾನಗಳು ನೆರವೇರಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More
Next Story