ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಹೊತ್ತಿ ಉರಿದ ಬೋಗಿ; ತಪ್ಪಿದ ಭಾರೀ ಅನಾಹುತ
x

ಹಳೆಯ ರೈಲು ಬೋಗಿಗೆ ಬೆಂಕಿ ಹೊತ್ತಿಕೊಳ್ಳಲು ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಹೊತ್ತಿ ಉರಿದ ಬೋಗಿ; ತಪ್ಪಿದ ಭಾರೀ ಅನಾಹುತ

ಹಳೆಯ ರೈಲು ಬೋಗಿಗೆ ಬೆಂಕಿ ಹೊತ್ತಿಕೊಳ್ಳಲು ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ರೈಲ್ವೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.


Click the Play button to hear this message in audio format

ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಹಳೆಯ ರೈಲು ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ. ಪ್ಲಾಟ್‌ಫಾರ್ಮ್ ನಂಬರ್ 1ರ ಸಮೀಪ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಪ್ರಯಾಣಿಕರು ಹಾಗೂ ರೈಲ್ವೆ ಸಿಬ್ಬಂದಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಬೋಗಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಬಳಿಕ ಮಾಹಿತಿ ಅಗ್ನಿಶಾಮಕ ದಳಕ್ಕೆ ನೀಡಲಾಗಿದೆ. ಕೂಡಲೇ ಸ್ಥಳಕ್ಕೆ ಬಂದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಶಾರ್ಟ್ ಸರ್ಕ್ಯೂಟ್ ಶಂಕೆ

ಹಳೆಯ ಬೋಗಿಗೆ ಬೆಂಕಿ ಹೊತ್ತಿಕೊಳ್ಳಲು ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ಬೆಂಕಿ ನಿಖರವಾಗಿ ಹೇಗೆ ಮತ್ತು ಯಾವ ಕಾರಣಕ್ಕೆ ಕಾಣಿಸಿಕೊಂಡಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತು ರೈಲ್ವೆ ಪೊಲೀಸರು ತನಿಖೆ ಆರಂಭಿಸಿದ್ದು, ಘಟನೆಯ ಸಂಪೂರ್ಣ ಕಾರಣವನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.

Read More
Next Story