ಕೆಂಗೇರಿ ಬಳಿ ಆನೆ ದಾಳಿ ಶಂಕೆ: ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿ ದಾರುಣ ಸಾವು
x

ಮೃತದೇಹ ಪತ್ತೆಯಾದ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಕೆಂಗೇರಿ ಬಳಿ ಆನೆ ದಾಳಿ ಶಂಕೆ: ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿ ದಾರುಣ ಸಾವು

ಅಂಚೆಪಾಳ್ಯ ಗ್ರಾಮದ ನಿವಾಸಿ ನಾಗರಾಜ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇಂದು ಬೆಳಗಿನ ಜಾವ ಸುಮಾರು 5 ಗಂಟೆಗೆ ವಾಕಿಂಗ್‌ಗೆ ತೆರಳಿದ್ದ ವೇಳೆ ನಾಗರಾಜ್ ಅವರ ಮೇಲೆ ಆನೆ ದಾಳಿ ನಡೆಸಿರಬಹುದು ಎಂದು ಶಂಕಿಸಲಾಗಿದೆ.


Click the Play button to hear this message in audio format

ಕೆಂಗೇರಿ ಸಮೀಪದ ಆರ್‌.ಆರ್‌. ವೈದ್ಯಕೀಯ ಕಾಲೇಜಿನ ಹಿಂಭಾಗದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ. ಆನೆ ದಾಳಿಯಿಂದಲೇ ಸಾವು ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳದಲ್ಲಿ ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಅಂಚೆಪಾಳ್ಯ ಗ್ರಾಮದ ನಿವಾಸಿ ನಾಗರಾಜ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗಿನ ಜಾವ ಸುಮಾರು 5 ಗಂಟೆಗೆ ವಾಕಿಂಗ್‌ಗೆ ತೆರಳಿದ್ದ ವೇಳೆ ನಾಗರಾಜ್ ಅವರ ಮೇಲೆ ಆನೆ ದಾಳಿ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಘಟನೆಯ ನಿಖರ ಕಾರಣ ಇನ್ನಷ್ಟೇ ದೃಢಪಡಬೇಕಿದೆ.

ಎರಡು ಕಾಂಪೌಂಡ್‌ಗಳು ಧ್ವಂಸ

ಘಟನಾ ಸ್ಥಳದ ಸಮೀಪದಲ್ಲಿರುವ ಎರಡು ಕಾಂಪೌಂಡ್‌ಗಳು ಉರುಳಿಬಿದ್ದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಆನೆ ಸಂಚರಿಸಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆಯ ಬಳಿಕ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೃತದೇಹ ಪತ್ತೆಯಾದ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆನೆ ದಾಳಿಯಿಂದಲೇ ವ್ಯಕ್ತಿ ಮೃತಪಟ್ಟಿದ್ದಾರೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More
Next Story