ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ ನಾಳೆ; ಸಂಚಾರ ಮಾರ್ಗ ಬದಲಾವಣೆ
x
ಪ್ರಧಾನಿ ಮೋದಿ

ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ ನಾಳೆ; ಸಂಚಾರ ಮಾರ್ಗ ಬದಲಾವಣೆ

ಎಚ್‌ಎಎಲ್‌ನಲ್ಲಿ ರಾಜ್ಯ ಬಿಜೆಪಿ ಘಟಕ ಹಮ್ಮಿಕೊಂಡಿರುವ ಅಭಿನಂದನಾ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ನಂತರ ಆರ್ಟ್ ಆಫ್ ಲಿವಿಂಗ್‌ನ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.


ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಲ್ಲದೇ ಪ್ರಮುಖ ರಸ್ತೆಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

ಎಚ್‌ಎಎಲ್‌ನಲ್ಲಿ ರಾಜ್ಯ ಬಿಜೆಪಿ ಘಟಕ ಹಮ್ಮಿಕೊಂಡಿರುವ ಅಭಿನಂದನಾ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ನಂತರ ಆರ್ಟ್ ಆಫ್ ಲಿವಿಂಗ್ನ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನ ಹಾಗೂ 'ದಿ ಆರ್ಟ್ ಆಫ್ ಲಿವಿಂಗ್' ಸಂಸ್ಥೆಯ 45ನೇ ವಾರ್ಷಿಕೋತ್ಸವದ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿಯವರ ಭದ್ರತೆಯ ದೃಷ್ಟಿಯಿಂದ ಪೊಲೀಸರು ನಗರದ ಕೆಲವು ಭಾಗಗಳಲ್ಲಿ ಸಂಚಾರ ನಿರ್ಬಂಧ ವಿಧಿಸಿದ್ದಾರೆ.

ಎಲ್ಲೆಲ್ಲಿ ಸಂಚಾರ ನಿರ್ಬಂಧ?

• HAL ಗೇಟ್ ನಂ. 30ರ ಸುತ್ತಮುತ್ತ ಭಾನುವಾರ ಬೆಳಿಗ್ಗೆ 5ರಿಂದ ಮಧ್ಯಾಹ್ನ 3ರವರೆಗೆ ವಾಹನ ಸಂಚಾರ ಸಂಪೂರ್ಣ ಬಂದ್.

• ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಎಸ್.ಡಿ. ರಸ್ತೆ ಜಂಕ್ಷನ್ನಿಂದ ಟ್ರಿನಿಟಿ ಜಂಕ್ಷನ್‌ವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.

• ನೈಸ್ ರಸ್ತೆಯಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಕಾರ್ಯಕ್ರಮಕ್ಕೆ ಬರುವವರಿಗೆ ಎಚ್ಎಎಲ್ ಟ್ರಾನ್ಸ್‌ಪೋರ್ಟ್‌ ಡಿಪಾರ್ಟ್‌ಮೆಂಟ್‌ ಪಾರ್ಕಿಂಗ್ ಬಳಿ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡಲಾಗಿದೆ.

ಮುರುಗೇಶ್ ಪಾಳ್ಯದ ಸರ್ ಎಂ. ವಿಶ್ವೇಶ್ವರಯ್ಯ ಕಾಲೇಜು ಮೈದಾನ, ಎಚ್ಎಎಲ್ ಬಸ್ ಯಾರ್ಡ್ (ಸುರಂಜನ್ ದಾಸ್ ರಸ್ತೆ ಬಳಿ)ದಲ್ಲೂ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲಾಗಿದೆ. "ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕಾಗಿ ಈ ಬದಲಾವಣೆಗಳನ್ನು ಮಾಡಲಾಗಿದೆ. ಸಾರ್ವಜನಿಕರು ಸಹಕರಿಸಬೇಕು," ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಪರ್ಯಾಯ ಮಾರ್ಗ ಎಲ್ಲೆಲ್ಲಿ?

• ತುಮಕೂರು ರಸ್ತೆಯಿಂದ ಕನಕಪುರ ರಸ್ತೆಗೆ ತೆರಳುವವರು ಸಿಎಂಟಿಐ (CMTI) ಜಂಕ್ಷನ್ ಬಳಿ ತಿರುವು ಪಡೆದು ರಾಜಕುಮಾರ್‌ ಪುಣ್ಯಭೂಮಿ ರಸ್ತೆ ಮೂಲಕ ಸಾಗುವುದು.

• ಮಾಗಡಿ ರಸ್ತೆಯಿಂದ ಬರುವವರು ಸುಮ್ಮನಹಳ್ಳಿ ಜಂಕ್ಷನ್‌ನಲ್ಲಿ ಬಲಕ್ಕೆ ತಿರುವು ಪಡೆದು ಪ್ರಯಾಣ ಮುಂದುವರಿಸುವುದು.

• ಮೈಸೂರು ರಸ್ತೆಯಿಂದ ಬರುವವರು ನಾಯಂಡಹಳ್ಳಿ ಜಂಕ್ಷನ್ ಅಥವಾ ಕೆಂಗೇರಿ-ವಿಷ್ಣುವರ್ಧನ್ ರಸ್ತೆ ಮೂಲಕ ಉತ್ತರಹಳ್ಳಿ-ವಸಂತಪುರ ಕ್ರಾಸ್ ತಲುಪಿ ಕನಕಪುರ ರಸ್ತೆ ಸೇರಬಹುದು.

• ಕನಕಪುರಕ್ಕೆ ತೆರಳುವವರು ಕೋಣನಕುಂಟೆ ಕ್ರಾಸ್‌ನಲ್ಲಿ ಬಲಕ್ಕೆ ತಿರುವು ಪಡೆದು ಅಗರ, ಬಂಜಾರಪಾಳ್ಯ ರಸ್ತೆ ಮೂಲಕ ಕಗ್ಗಲೀಪುರ ತಲುಪಿ ಮುಂದೆ ಸಾಗಬಹುದು. ಅಥವಾ ಅಂಜನಾಪುರ 80 ಅಡಿ ರಸ್ತೆ ಮೂಲಕ ಬನ್ನೇರುಘಟ್ಟ ರಸ್ತೆ ಸೇರಿ ಕಗ್ಗಲೀಪುರಕ್ಕೆ ತೆರಳಬಹುದು.

Read More
Next Story