ಕರ್ನಾಟಕಕ್ಕೆ ಬ್ರಿಟಿಷ್ ಉಪ ಹೈಕಮಿಷನರ್ ಆಗಿ ಹರ್ಷಬೀರ್ ಸಂಘ ನೇಮಕ
x

ಹರ್ಷ್‌ಬೀರ್ ಸಿಂಗ್ ಸಂಘ ಕರ್ನಾಟಕದ ನೂತನ ಬ್ರಿಟಿಷ್ ಉಪ ಹೈಕಮಿಷನರ್ ಆಗಿ ನೇಮಕಗೊಂಡಿದ್ದಾರೆ.

ಕರ್ನಾಟಕಕ್ಕೆ ಬ್ರಿಟಿಷ್ ಉಪ ಹೈಕಮಿಷನರ್ ಆಗಿ ಹರ್ಷಬೀರ್ ಸಂಘ ನೇಮಕ

ಕರ್ನಾಟಕದಲ್ಲಿ ವ್ಯಾಪಾರ ಮತ್ತು ವಾಣಿಜ್ಯ ಸಂಬಂಧಗಳನ್ನು ಉತ್ತೇಜಿಸುವುದು, ವಿಜ್ಞಾನ, ತಂತ್ರಜ್ಞಾನ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವುದು ಮತ್ತು ಹವಾಮಾನ ಬದಲಾವಣೆ ಎದುರಿಸುವ ನಿಟ್ಟಿನಲ್ಲಿ ವಿವಿಧ ಪಾಲುದಾರರೊಂದಿಗೆ ಕಾರ್ಯನಿರ್ವಹಿಸುವುದು ಅವರ ಪ್ರಮುಖ ಹೊಣೆಗಾರಿಕೆಗಳಾಗಿವೆ.


Click the Play button to hear this message in audio format

ಕರ್ನಾಟಕದ ಬ್ರಿಟಿಷ್ ಉಪ ಹೈಕಮಿಷನರ್ ಆಗಿ ಹರ್ಷಬೀರ್ ಸಂಘ ಅವರನ್ನು ನೇಮಕ ಮಾಡಿರುವುದಾಗಿ ಯುನೈಟೆಡ್ ಕಿಂಗ್‌ಡಮ್ ಅಧಿಕೃತವಾಗಿ ಘೋಷಿಸಿದೆ. ಕರ್ನಾಟಕದಲ್ಲಿ ಬ್ರಿಟನ್ ಮತ್ತು ರಾಜ್ಯದ ನಡುವಿನ ವಿವಿಧ ಕ್ಷೇತ್ರಗಳ ಸಂಪರ್ಕ ಹಾಗೂ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಜವಾಬ್ದಾರಿ ಸಂಘ ಅವರ ಮೇಲಿರಲಿದೆ.

ಕರ್ನಾಟಕದಲ್ಲಿ ವ್ಯಾಪಾರ ಮತ್ತು ವಾಣಿಜ್ಯ ಸಂಬಂಧಗಳನ್ನು ಉತ್ತೇಜಿಸುವುದು, ವಿಜ್ಞಾನ, ತಂತ್ರಜ್ಞಾನ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವುದು ಮತ್ತು ಹವಾಮಾನ ಬದಲಾವಣೆ ಎದುರಿಸುವ ನಿಟ್ಟಿನಲ್ಲಿ ವಿವಿಧ ಪಾಲುದಾರರೊಂದಿಗೆ ಕಾರ್ಯನಿರ್ವಹಿಸುವುದು ಅವರ ಪ್ರಮುಖ ಹೊಣೆಗಾರಿಕೆಗಳಾಗಿವೆ.

ಇದರ ಜತೆಗೆ ದಕ್ಷಿಣ ಏಷ್ಯಾದಲ್ಲಿ ಹೂಡಿಕೆಗಾಗಿ ಯುಕೆಯ ಉಪ ವ್ಯಾಪಾರ ಆಯುಕ್ತರಾಗಿಯೂ ಹರ್ಷಬೀರ್ ಸಂಘ ಕಾರ್ಯನಿರ್ವಹಿಸಲಿದ್ದಾರೆ. ಭಾರತ ಸೇರಿದಂತೆ ದಕ್ಷಿಣ ಏಷ್ಯಾದ ರಾಷ್ಟ್ರಗಳಿಂದ ವಿದೇಶಿ ನೇರ ಹೂಡಿಕೆಯನ್ನು ಆಕರ್ಷಿಸುವಲ್ಲಿ ಯುಕೆಯನ್ನು ಆದ್ಯತೆಯ ತಾಣವನ್ನಾಗಿ ಮತ್ತಷ್ಟು ಬಲಪಡಿಸುವುದು ಅವರ ಜವಾಬ್ದಾರಿಯ ಪ್ರಮುಖ ಭಾಗವಾಗಿದೆ ಎಂದು ಬ್ರಿಟನ್ ಸರ್ಕಾರದ ಪ್ರಕಟಣೆ ತಿಳಿಸಿದೆ.

ಭಾರತದಲ್ಲಿ ಈ ಹೊಸ ಜವಾಬ್ದಾರಿ ವಹಿಸಿಕೊಳ್ಳುವ ಮುನ್ನ ಹರ್ಷಬೀರ್ ಸಂಘ ಅವರು ಯುಕೆ ಬಾಹ್ಯಾಕಾಶ ಸಂಸ್ಥೆಯಲ್ಲಿ ಉಪಗ್ರಹ ಸಂವಹನ ಮತ್ತು ಪಿಎನ್‌ಟಿ (ಸ್ಥಾನ ನಿರ್ಣಯ, ನ್ಯಾವಿಗೇಶನ್ ಮತ್ತು ಸಮಯ) ವಿಭಾಗದ ಉಪ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಹೊಸ ನೇಮಕಾತಿಯ ಕುರಿತು ಪ್ರತಿಕ್ರಿಯಿಸಿರುವ ಸಂಘ, ಕರ್ನಾಟಕವು ಭಾರತದ ಅತ್ಯಂತ ಕ್ರಿಯಾಶೀಲ ರಾಜ್ಯಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ. ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಶಿಕ್ಷಣ ಮತ್ತು ಹವಾಮಾನ ಬದಲಾವಣೆ ವಿರುದ್ಧದ ಕ್ರಮ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಕರ್ನಾಟಕವು ಯುಕೆಯ ಪ್ರಮುಖ ಪಾಲುದಾರವಾಗಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಮತ್ತು ಯುಕೆ ನಡುವಿನ ಸಂಬಂಧವನ್ನು ಮತ್ತಷ್ಟು ವಿಸ್ತರಿಸಲು ಹೊಸ ಜವಾಬ್ದಾರಿಯಲ್ಲಿ ಕಾರ್ಯನಿರ್ವಹಿಸುವುದಾಗಿ ಸಂಘ ತಿಳಿಸಿದ್ದಾರೆ. ವ್ಯಾಪಾರ ಮತ್ತು ಹೂಡಿಕೆ ಮಾತ್ರವಲ್ಲದೆ ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ ಹಾಗೂ ಹವಾಮಾನ ಕ್ಷೇತ್ರಗಳಲ್ಲಿಯೂ ಉಭಯಪಕ್ಷೀಯ ಸಹಕಾರಕ್ಕೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆಯಿದೆ.

Read More
Next Story