ಹಾಸನಾಂಬ ದೇಗುಲದಲ್ಲಿ ಸಿಎಂ ಡಿಕೆಶಿ ವಿರುದ್ಧ ಧಿಕ್ಕಾರ, LED ಸ್ಕ್ರೀನ್‌ಗೆ ಚಪ್ಪಲಿ ಎಸೆದ ಭಕ್ತರು
ಹಾಸನಾಂಬೆ ದರ್ಶನಕ್ಕೆ ಗಂಟೆಗಟ್ಟಲೆ ಕಾಯುತ್ತಿದ್ದ ಭಕ್ತರು, ಸಿಎಂ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಪ್ರಸಾರವಾದ ಎಲ್‌ಇಡಿ ಪರದೆಗೆ ಚಪ್ಪಲಿ ಎಸೆದು ಆಕ್ರೋಶ ವ್ಯಕ್ತಪಡಿಸಿದರು.
ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ದರ್ಶನಕ್ಕೆ ಬಂದಿದ್ದ ಭಕ್ತರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ಕಾಯುವಂತಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಹಿನ್ನೆಲೆಯಲ್ಲಿ ಸಾಮಾನ್ಯ ಭಕ್ತರ ದರ್ಶನಕ್ಕೆ ವಿಳಂಬವಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಸಿಎಂ ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಪ್ರಸಾರವಾಗುತ್ತಿದ್ದ ಎಲ್‌ಇಡಿ ಪರದೆಗೆ ಭಕ್ತರು ಚಪ್ಪಲಿ ಎಸೆದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಈ ಘಟನೆ ದೇವಸ್ಥಾನದ ಆವರಣದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ಸೃಷ್ಟಿಸಿದೆ.
Next Story

