ಮತ್ತೆ ಕುಸಿದ ಕೆತ್ತಿಕಲ್ ಬೆಟ್ಟ
ಮಂಗಳೂರಿನ ತಿರುವೈಲು ಬಳಿಯ ಕೇತಿಕಲ್ ಬೆಟ್ಟದಲ್ಲಿ ಭಾರೀ ಮಳೆಗೆ ಮತ್ತೆ ಭೂಕುಸಿತ ಸಂಭವಿಸಿದೆ. ಬಂಡೆಗಳು ರಸ್ತೆಗೆ ಉರುಳುವ ಆತಂಕದಿಂದ ಶಾಶ್ವತ ಪರಿಹಾರಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.
ಮಂಗಳೂರಿನ ತಿರುವೈಲು ಸಮೀಪದ ಕೇತಿಕಲ್ ಬೆಟ್ಟ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಮತ್ತೆ ಭೂಕುಸಿತ ಸಂಭವಿಸಿದೆ. ಇದರಿಂದ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಆತಂಕದಲ್ಲಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿರುವ ರಸ್ತೆ ಕಾಮಗಾರಿ ವೈಜ್ಞಾನಿಕ ರೀತಿಯಲ್ಲಿ ನಡೆದಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮಳೆಗಾಲದಲ್ಲೇ ಕಾಮಗಾರಿ ಆರಂಭಿಸಿ ಅರ್ಧಕ್ಕೆ ಬಿಟ್ಟುಬಿಡುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ ಎನ್ನಲಾಗಿದೆ. ಬೆಟ್ಟದಿಂದ ಬೃಹತ್ ಬಂಡೆಗಳು ಯಾವುದೇ ಕ್ಷಣದಲ್ಲಿ ರಸ್ತೆಗೆ ಉರುಳುವ ಅಪಾಯವಿದ್ದು, ಶಾಶ್ವತ ಪರಿಹಾರ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಸ್ಥಳೀಯರ ಆತಂಕ ಮತ್ತು ಭೂಕುಸಿತದ ದೃಶ್ಯಗಳು ಈ ವಿಡಿಯೋದಲ್ಲಿವೆ.
Next Story

