ರಾಜ್ಯಾದ್ಯಂತ ಮಳೆಯ ತೀವ್ರತೆ ತಗ್ಗುವ ಸಾಧ್ಯತೆ- ಹವಾಮಾನ ಇಲಾಖೆ
x

ಭಾರಿ ಮಳೆಯಿಂದ ಕಂಗಾಲಾಗಿದ್ದ ಜನರಿಗೆ ಕೊಂಚ ರಿಲೀಫ್

ರಾಜ್ಯಾದ್ಯಂತ ಮಳೆಯ ತೀವ್ರತೆ ತಗ್ಗುವ ಸಾಧ್ಯತೆ- ಹವಾಮಾನ ಇಲಾಖೆ

ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ತುಂತುರು ಮಳೆಯಾಗಬಹುದು.


Click the Play button to hear this message in audio format

ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿದ್ದ ಭಾರಿ ಮಳೆಯ ಪ್ರಮಾಣ ಮುಂಬರುವ ದಿನಗಳಲ್ಲಿ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ತಗ್ಗಲಿದ್ದು, ಒಳನಾಡಿನ ಜಿಲ್ಲೆಗಳಲ್ಲಿಯೂ ಸಾಮಾನ್ಯದಿಂದ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ತುಂತುರು ಮಳೆಯಾಗಬಹುದು.

ಆಗಾಗ ವಾತಾವರಣದಲ್ಲಿ ಆಗುವ ಬದಲಾವಣೆಗಳಿಂದಾಗಿ ಉಷ್ಣಾಂಶದಲ್ಲಿ ಸ್ವಲ್ಪ ಮಟ್ಟಿನ ಏರಿಕೆಯಾಗುವ ಸಾಧ್ಯತೆಯಿದೆ. ಇದರಿಂದಾಗಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಮಳೆಯಿಂದ ಕಂಗಾಲಾಗಿದ್ದ ಜನರಿಗೆ ಹಾಗೂ ರೈತರಿಗೆ ಸದ್ಯಕ್ಕೆ ಕೊಂಚ ರಿಲೀಫ್ ಸಿಕ್ಕಂತಾಗಿದೆ. ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯ ಮುನ್ನೆಚ್ಚರಿಕೆ ಯಾವುದೂ ಇಲ್ಲವೆಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

Read More
Next Story