
ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಬೆನ್ನಲ್ಲೇ ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಿದೆ.
ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಬೆದರಿಕೆಗೆ ಮಣಿದ ಸರ್ಕಾರ- ಬರದ ಪಟ್ಟಿಗೆ ಇಂಡಿ ಸೇರ್ಪಡೆ
ತಮ್ಮ ಕ್ಷೇತ್ರದ ವ್ಯಾಪ್ತಿಯ ತಾಲೂಕುಗಳನ್ನು ಬರ ಪಟ್ಟಿಗೆ ಸೇರಿಸದಿರುವುದನ್ನು ಪ್ರಶ್ನಿಸಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ ಸರ್ಕಾರ ಹೆಚ್ಚುವರಿ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದ್ದು, ಇಂಡಿಗೂ ಸ್ಥಾನ ನೀಡಿದೆ.
ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಸೇರಿಸದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ನೀಡಿದ ಬೆನ್ನಲ್ಲೇ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇದೀಗ ಹೆಚ್ಚುವರಿಯಾಗಿ ಘೋಷಿಸಿರುವ ಬರಪೀಡಿತ ತಾಲೂಕುಗಳ ಪಟ್ಟಿಗೆ ಇಂಡಿ ತಾಲೂಕನ್ನೂ ಸೇರ್ಪಡೆ ಮಾಡಲಾಗಿದೆ.
ತಮ್ಮ ಕ್ಷೇತ್ರದ ವ್ಯಾಪ್ತಿಯ ತಾಲೂಕುಗಳನ್ನು ಬರ ಪಟ್ಟಿಗೆ ಸೇರಿಸದಿರುವುದನ್ನು ಪ್ರಶ್ನಿಸಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ ಸರ್ಕಾರ ಹೆಚ್ಚುವರಿ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದ್ದು, ಇಂಡಿಗೂ ಸ್ಥಾನ ನೀಡಿದೆ.
ಹೆಚ್ಚುವರಿಯಾಗಿ 29 ತಾಲೂಕುಗಳ ಸೇರ್ಪಡೆ
ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಪರಿಗಣಿಸಿ ಸರ್ಕಾರ 29 ಹೆಚ್ಚುವರಿ ತಾಲೂಕುಗಳನ್ನು ಪಟ್ಟಿಗೆ ಸೇರಿಸಿದೆ. ಈ ಸಂಬಂಧ ಗ್ರೌಂಡ್ ಟ್ರೂಥಿಂಗ್ ಆಧಾರಿತ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಹೊಸ ಸೇರ್ಪಡೆಯಾದ ತಾಲೂಕುಗಳ ಪಟ್ಟಿಯಲ್ಲಿ ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲೂಕುಗಳೂ ಇವೆ.
ಹೆಚ್ಚುವರಿಯಾಗಿ ಬರಪೀಡಿತ ತಾಲೂಕುಗಳಾಗಿ ಔರಾದ್, ಗೋಕಾಕ್, ರಾಮದುರ್ಗ, ಸೌದತ್ತಿ, ಕಾಗವಾಡ, ಇಂಡಿ, ಚಡಚಣ, ಕಲಘಟಗಿ, ಕುಂದಗೋಳ, ಅಳ್ನಾವರ, ಶಿಕಾರಿಪುರ, ಶಿವಮೊಗ್ಗ, ಭದ್ರಾವತಿ, ಸೊರಬ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಳಸ, ಮಡಿಕೇರಿ, ಕುಶಾಲನಗರ, ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ, ಉಡುಪಿ, ಬೈಂದೂರು, ಅಂಕೋಲಾ, ಭಟ್ಕಳ, ಹಳಿಯಾಳ ಹಾಗೂ ಶಿರಸಿ ತಾಲೂಕುಗಳು ಸೇರಿವೆ.
ಶಾಸಕರ ರಾಜೀನಾಮೆಯ ಬಳಿಕ ಇಂಡಿ ತಾಲೂಕು ಬರ ಪಟ್ಟಿಗೆ ಸೇರ್ಪಡೆಯಾಗಿರುವುದು ಇದೀಗ ರಾಜ್ಯ ರಾಜಕೀಯದಲ್ಲಿ ಗಮನ ಸೆಳೆದಿದೆ. ಹೊಸದಾಗಿ ಸೇರ್ಪಡೆಯಾದ ತಾಲೂಕುಗಳಿಗೆ ಬರ ಪರಿಹಾರ ಹಾಗೂ ಸರ್ಕಾರದ ವಿವಿಧ ನೆರವು ಕ್ರಮಗಳು ದೊರೆಯುವ ನಿರೀಕ್ಷೆಯಿದೆ.

