x

ಕರ್ನಾಟಕದ 2 ವಿಮಾನ ನಿಲ್ದಾಣಗಳಲ್ಲಿ ಇಂಡಿಗೋ ವಿಮಾನಗಳಲ್ಲಿ ತಾಂತ್ರಿಕ ದೋಷ; ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಮಂಗಳೂರು-ಬೆಂಗಳೂರು ಇಂಡಿಗೋ ವಿಮಾನ ಟೇಕಾಫ್‌ಗೂ ಮುನ್ನ ಚಕ್ರದ ಬಳಿ ಸ್ಪಾರ್ಕ್ ಕಾಣಿಸಿಕೊಂಡಿದೆ. ಪೈಲಟ್ ತುರ್ತು ಬ್ರೇಕ್ ಹಾಕಿ 236 ಮಂದಿಯನ್ನು ಅಪಾಯದಿಂದ ಪಾರು ಮಾಡಿದ್ದಾರೆ


Click the Play button to hear this message in audio format

ಕರ್ನಾಟಕದ ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ಒಂದೇ ದಿನ ಇಂಡಿಗೋ ವಿಮಾನಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳಬೇಕಿದ್ದ ವಿಮಾನದಲ್ಲಿ ಟೇಕಾಫ್‌ಗೆ ಕೇವಲ 100 ಮೀಟರ್ ಬಾಕಿ ಇರುವಾಗ ಚಕ್ರದ ಬಳಿ ಸ್ಪಾರ್ಕ್ ಕಾಣಿಸಿಕೊಂಡಿದೆ. ಪೈಲಟ್ ತಕ್ಷಣ ತುರ್ತು ಬ್ರೇಕ್ ಹಾಕಿದ್ದರಿಂದ 229 ಪ್ರಯಾಣಿಕರು ಹಾಗೂ 7 ಸಿಬ್ಬಂದಿ ಸೇರಿ 236 ಮಂದಿ ಅಪಾಯದಿಂದ ಪಾರಾಗಿದ್ದಾರೆ. ಇನ್ನು ಬೆಂಗಳೂರಿನಿಂದ ಮಧುರೈಗೆ ತೆರಳಬೇಕಿದ್ದ ವಿಮಾನದಲ್ಲೂ ಹೈಡ್ರಾಲಿಕ್ ದೋಷ ಕಾಣಿಸಿಕೊಂಡಿತ್ತು.

Read More
Next Story