ಬರ ಘೋಷಣೆಗೆ ಆಗ್ರಹಿಸಿ ಜಗಳೂರು ಬಂದ್; ರಸ್ತೆ ತಡೆ, ಟೈರ್ ಸುಟ್ಟು ಬಿಜೆಪಿ ಆಕ್ರೋಶ
x

ಜಗಳೂರನ್ನು ಬರ ಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಬಂದ್ ನಡೆಸಿದರು.

ಬರ ಘೋಷಣೆಗೆ ಆಗ್ರಹಿಸಿ ಜಗಳೂರು ಬಂದ್; ರಸ್ತೆ ತಡೆ, ಟೈರ್ ಸುಟ್ಟು ಬಿಜೆಪಿ ಆಕ್ರೋಶ

ಬಿಜೆಪಿ ಕಾರ್ಯಕರ್ತರು ರಸ್ತೆಗೆ ಮರದ ದಿಮ್ಮಿಗಳನ್ನು ಅಡ್ಡವಿಟ್ಟು ಪ್ರತಿಭಟನೆ ನಡೆಸಿದರು. ಕೆಲವೆಡೆ ರಸ್ತೆಯ ಮಧ್ಯೆ ಟೈರ್‌ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಬೆಂಕಿ ನಂದಿಸಲು ಮುಂದಾದ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.


Click the Play button to hear this message in audio format

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕನ್ನು ಬರ ಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿರುವುದನ್ನು ವಿರೋಧಿಸಿ ಬಿಜೆಪಿ ನಾಯಕರು ಸೋಮವಾರ ಜಗಳೂರು ಬಂದ್‌ಗೆ ಕರೆ ನೀಡಿದ್ದಾರೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ನಡೆಸಲು ಕರೆ ನೀಡಲಾಗಿದ್ದು, ರೈತ ಸಂಘಟನೆಗಳು ಹಾಗೂ ಕನ್ನಡ ಪರ ಸಂಘಟನೆಗಳು ಕೂಡ ಪ್ರತಿಭಟನೆಗೆ ಬೆಂಬಲ ಸೂಚಿಸಿವೆ.

ಬಂದ್ ಹಿನ್ನೆಲೆಯಲ್ಲಿ ಜಗಳೂರು ಪಟ್ಟಣದ ಬಹುತೇಕ ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದವು. ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಪ್ರತಿಭಟನೆಯ ಪರಿಣಾಮ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಬಸ್‌ಗಳು ಸಂಚರಿಸದ ಕಾರಣ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಕೆಲವೆಡೆ ನಡೆದುಕೊಂಡೇ ತೆರಳುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ರಸ್ತೆ ತಡೆ, ಟೈರ್‌ಗೆ ಬೆಂಕಿ

ಬಿಜೆಪಿ ಕಾರ್ಯಕರ್ತರು ರಸ್ತೆಗೆ ಮರದ ದಿಮ್ಮಿಗಳನ್ನು ಅಡ್ಡವಿಟ್ಟು ಪ್ರತಿಭಟನೆ ನಡೆಸಿದರು. ಕೆಲವೆಡೆ ರಸ್ತೆಯ ಮಧ್ಯೆ ಟೈರ್‌ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಬೆಂಕಿ ನಂದಿಸಲು ಮುಂದಾದ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಮಾಜಿ ಶಾಸಕ ಸೇರಿ 50ಕ್ಕೂ ಹೆಚ್ಚು ಮಂದಿ ವಶಕ್ಕೆ

ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯಲು ಮುಂದಾದರು. ಈ ವೇಳೆ ನೂಕಾಟ-ತಳ್ಳಾಟ ನಡೆದಿದ್ದು, ಮಾಜಿ ಶಾಸಕ ಎಸ್.ವಿ. ರಾಮಚಂದ್ರಪ್ಪ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ವಶಕ್ಕೆ ಪಡೆದು ಕರೆದೊಯ್ಯುವ ಸಂದರ್ಭದಲ್ಲಿ ಬಸ್‌ನ ಗಾಜು ಒಡೆದ ಘಟನೆ ಕೂಡ ನಡೆದಿದೆ. ಒಡೆದ ಗಾಜು ಪೊಲೀಸ್ ವಾಹನದ ಮೇಲೂ ಬಿದ್ದಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಬರ ಘೋಷಣೆಗೆ ಒತ್ತಾಯ

ಜಗಳೂರು ಹಲವು ವರ್ಷಗಳಿಂದ ಬರ ಪರಿಸ್ಥಿತಿ ಎದುರಿಸುತ್ತಿದ್ದು, ಕೃಷಿಗೆ ಮಳೆಯನ್ನೇ ಅವಲಂಬಿಸಬೇಕಾಗಿದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಜಮೀನುಗಳ ವಾಸ್ತವ ಸ್ಥಿತಿಯನ್ನು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಮತ್ತು ಜಗಳೂರನ್ನು ಬರ ಪೀಡಿತ ತಾಲೂಕು ಎಂದು ಘೋಷಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

Read More
Next Story