ಕಲಬುರಗಿ ಕೇಂದ್ರ ಕಾರಾಗೃಹದಿಂದ ಇಬ್ಬರು ವಿಚಾರಣಾಧೀನ ಕೈದಿಗಳ ಪಲಾಯನ
x

ಜೂನ್ 19 ರಂದು ಥಿಯೇಟರ್‌ಗಳಲ್ಲಿ ರಿಲೀಸ್ ಆಗಿದ್ದ ಈ ಸಿನಿಮಾ, ಜಾಗತಿಕವಾಗಿ ಬರೋಬ್ಬರಿ 100 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಹೊಸ ಇತಿಹಾಸ ಸೃಷ್ಟಿಸಿದೆ.

ಕಲಬುರಗಿ ಕೇಂದ್ರ ಕಾರಾಗೃಹದಿಂದ ಇಬ್ಬರು ವಿಚಾರಣಾಧೀನ ಕೈದಿಗಳ ಪಲಾಯನ

ಕಾರಾಗೃಹದ ಮೂಲಗಳ ಪ್ರಕಾರ, ಭಾನುವಾರ ಮುಂಜಾನೆ ಜೈಲಿನ ಸಿಬ್ಬಂದಿ ದೈನಂದಿನ ಗಣತಿ ಪ್ರಕ್ರಿಯೆ ನಡೆಸುತ್ತಿದ್ದಾಗ ಇಬ್ಬರು ಕೈದಿಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.


Click the Play button to hear this message in audio format

ಇಲ್ಲಿನ ಜಗತ್ ವೃತ್ತದ ಬಳಿ ಇರುವ ಹೈ ಹೈ ಸೆಕ್ಯುರಿಟಿ ವಲಯ ಎಂದೇ ಗುರುತಿಸಲ್ಪಡುವ ಕಲಬುರಗಿ ಕೇಂದ್ರ ಕಾರಾಗೃಹದಿಂದ ಇಬ್ಬರು ವಿಚಾರಣಾಧೀನ ಕೈದಿಗಳು ಭಾನುವಾರ ಮುಂಜಾನೆ ಗೋಡೆ ಹತ್ತಿ ಪಲಾಯನ ಮಾಡಿದ್ದಾರೆ. ಈ ಘಟನೆಯು ಜೈಲಿನ ಆಡಳಿತ ಮಂಡಳಿ ಹಾಗೂ ಭದ್ರತಾ ವ್ಯವಸ್ಥೆಯ ಲೋಪಗಳನ್ನು)ಎತ್ತಿ ತೋರಿಸಿದ್ದು, ಪೊಲೀಸ್ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ.

ಪಲಾಯನ ಮಾಡಿದ ಕೈದಿಗಳನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಬಸವರಾಜ ಹಡಪದ ಮತ್ತು ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಆನಂದ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಕೊಲೆ, ಕಳವು ಸೇರಿದಂತೆ ವಿವಿಧ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳಾಗಿದ್ದು, ಇತ್ತೀಚೆಗಷ್ಟೇ ಇವರನ್ನು ಕಲಬುರಗಿ ಜೈಲಿಗೆ ಕರೆತರಲಾಗಿತ್ತು ಎನ್ನಲಾಗಿದೆ.

ಏನಿದು ಎಸ್ಕೇಪ್​

ಕಾರಾಗೃಹದ ಮೂಲಗಳ ಪ್ರಕಾರ, ಭಾನುವಾರ ಮುಂಜಾನೆ ಜೈಲಿನ ಸಿಬ್ಬಂದಿ ದೈನಂದಿನ ಗಣತಿ ಪ್ರಕ್ರಿಯೆ ನಡೆಸುತ್ತಿದ್ದಾಗ ಇಬ್ಬರು ಕೈದಿಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಇಡೀ ಜೈಲಿನ ಆವರಣದಲ್ಲಿ ಹುಡುಕಾಟ ನಡೆಸಲಾಯಿತಾದರೂ ಅವರ ಸುಳಿವು ಸಿಕ್ಕಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ, ಕೈದಿಗಳು ಜೈಲಿನ ಹಿಂಭಾಗದ ಕಾವಲು ಗೋಪುರದ ಸಮೀಪವಿರುವ ಎತ್ತರದ ಕಾಂಪೌಂಡ್ ಗೋಡೆಯನ್ನು ಹತ್ತಿ, ಅಲ್ಲಿಂದ ಹೊರಗೆ ಜಿಗಿದು ಪರಾರಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಜೈಲಿನಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪ್ರಸ್ತುತ ಪರಿಶೀಲಿಸಲಾಗುತ್ತಿದೆ.

ತೀವ್ರಗೊಂಡ ಶೋಧ ಕಾರ್ಯ

ಘಟನೆ ತಿಳಿಯುತ್ತಿದ್ದಂತೆ ಕಲಬುರಗಿ ನಗರ ಪೊಲೀಸ್ ಕಮಿಷನರ್, ಡಿಸಿಪಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗಿರುವ ಕೈದಿಗಳ ಪತ್ತೆಗಾಗಿ ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಪ್ರಮುಖ ರಸ್ತೆಗಳು, ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಆರೋಪಿಗಳ ಪತ್ತೆಗಾಗಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಜೈಲಿನ ಕಟ್ಟುನಿಟ್ಟಿನ ಭದ್ರತೆಯ ನಡುವೆಯೂ ಕೈದಿಗಳು ಹೇಗೆ ತಪ್ಪಿಸಿಕೊಂಡರು ಎಂಬ ಬಗ್ಗೆ ಆಂತರಿಕ ತನಿಖೆಗೂ ಆದೇಶಿಸಲಾಗಿದೆ. ಕರ್ತವ್ಯ ಲೋಪ ಎಸಗಿದ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಾಧ್ಯತೆ ಇದೆ. ಈ ಕುರಿತು ಕಲಬುರಗಿ ಜೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More
Next Story