2027ರಿಂದ ಪ್ರಥಮ ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ
ಹೊಸ ವ್ಯವಸ್ಥೆಯಲ್ಲಿ ರಾಜ್ಯಮಟ್ಟದ ವಿಷಯ ತಜ್ಞರು ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಲಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ದೊರೆಯುವುದರ ಜೊತೆಗೆ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಲಿದೆ ಎಂಬುದು ಶಿಕ್ಷಣ ಇಲಾಖೆಯ ಉದ್ದೇಶವಾಗಿದೆ.
ಕರ್ನಾಟಕದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ 2027ರಿಂದ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾಗಲಿದೆ. ರಾಜ್ಯದ ಎಲ್ಲಾ ಪಿಯು ಕಾಲೇಜುಗಳಲ್ಲೂ ವಾರ್ಷಿಕ ಪರೀಕ್ಷೆಗೆ ಒಂದೇ ಮಾದರಿಯ ಕೇಂದ್ರೀಕೃತ ಪ್ರಶ್ನೆಪತ್ರಿಕೆ ಜಾರಿಗೆ ಬರಲಿದೆ. ಪ್ರಸ್ತುತ ಜಿಲ್ಲೆ ಅಥವಾ ಕಾಲೇಜುಗಳ ಮಟ್ಟದಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಲಾಗುತ್ತಿದ್ದು, ಇದರಿಂದ ಪರೀಕ್ಷೆಯ ಕಠಿಣತೆಯಲ್ಲಿ ವ್ಯತ್ಯಾಸ ಕಂಡುಬರುತ್ತಿತ್ತು. ಹೊಸ ವ್ಯವಸ್ಥೆಯಲ್ಲಿ ರಾಜ್ಯಮಟ್ಟದ ವಿಷಯ ತಜ್ಞರು ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಲಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ದೊರೆಯುವುದರ ಜೊತೆಗೆ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಲಿದೆ ಎಂಬುದು ಶಿಕ್ಷಣ ಇಲಾಖೆಯ ಉದ್ದೇಶವಾಗಿದೆ. ಅಲ್ಲದೆ, NEET, CET ಮತ್ತು JEE ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೂ ಈ ವ್ಯವಸ್ಥೆ ಅನುಕೂಲವಾಗುವ ನಿರೀಕ್ಷೆಯಿದೆ.
Next Story

