ಕಾವೇರಿ ನೀರು ವಿವಾದ: ಆಗಸ್ಟ್ 13 ರಂದು ಕರ್ನಾಟಕ ಬಂದ್‌ಗೆ ಕರೆ
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶದ ವಿರುದ್ಧ ಕರ್ನಾಟಕದಲ್ಲಿ ಆಕ್ರೋಶ ಭುಗಿಲೆದ್ದಿದೆ. ಕನ್ನಡಪರ ಸಂಘಟನೆಗಳು ಆಗಸ್ಟ್ 13ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್‌ಗೆ ಕರೆ ನೀಡಿವೆ.
ಕಾವೇರಿ ನೀರು ತಮಿಳುನಾಡಿಗೆ ಹರಿಸುವ ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶದ ವಿರುದ್ಧ ಕನ್ನಡಪರ ಸಂಘಟನೆಗಳು ರೊಚ್ಚಿಗೆದ್ದಿವೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಆಗಸ್ಟ್ 13 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಈ ಸಂಬಂಧಿಸಿದಂತೆ ವಾಟಾಳ್ ನಾಗರಾಜ್, ಸಾ.ರಾ. ಗೋವಿಂದು ನೇತೃತ್ವದಲ್ಲಿ ಕನ್ನಡ ಒಕ್ಕೂಟ ಸಭೆ ನಡೆಸಲಾಯಿತು. ಸಭೆಯಲ್ಲಿ ಕರ್ನಾಟಕ ಬಂದ್ ನಡೆಸಲು ತೀರ್ಮಾನಿಸಲಾಯಿತು.
ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾತನಾಡಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ನಮ್ಮಡ್ಯಾಂಗಳಲ್ಲಿ ಎಷ್ಟು ನೀರಿದೆ ಅಂತಾ ನೋಡಬೇಕು ನಮ್ಮಲ್ಲಿ ನೀರಿಲ್ಲದೆ ಹೇಗೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯ. ಆಗಸ್ಟ್ 13 ರಂದು ಬಂದ್ ನಡೆಸಲಿದ್ದು ಎಲ್ಲಾ ಸಂಘಟನೆಗಳು ಬೆಂಬಲ ನೀಡಲಿದೆ ಬಂದ್ ಅಭೂತಪೂರ್ವವಾಗಿ ಬಂದ್ ಆಗಲಿದೆ. ತಮಿಳುನಾಡು ಸಿಎಂ ವಿಜಯ್ ಕರ್ನಾಟಕಕ್ಕೆ ಬೇಟಿ ನೀಡುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿದರು.
ಕಾವೇರಿ ನೀರು ಬಿಡುಗಡೆ ಮಾಡಿ ಎಂದು ಒತ್ತಡ ಹೇರಲು ರಾಜ್ಯಕ್ಕೆ ಬರುವುದಾದರೆ ಬರುವುದು ಬೇಡ. ಒಂದು ವೇಳೆ ರಾಜ್ಯಕ್ಕೆ ಭೇಟಿ ನೀಡಿದರೆ ಅವರು ಬರುವ ಜಾಗ ಏರ್ ಪೋರ್ಟಿಗೆ ಮುತ್ತಿಗೆ ಹಾಕಲಾಗುತ್ತದೆ.ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಸಾ.ರಾ. ಗೋವಿಂದು ಮಾತನಾಡಿ ಸಿಎಂ ಡಿ.ಕೆ.ಶಿವಕುಮಾರ್ ಬಂಗಾರಪ್ಪ ಶಿಷ್ಯ ಈ ಹಿಂದೆ ಬಂಗಾರಪ್ಪ ತೆಗೆದುಕೊಂಡಂತೆ ತಿರ್ಮಾನಕೈಗೊಳ್ಳಲಿ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರನ್ನು ಬಿಡಬಾರದು. CWMA ನೀಡಿರುವ ಆದೇಶ ಸರಿಯಿಲ್ಲ ಡ್ಯಾಂಗಳಲ್ಲಿ ಎಷ್ಟು ನೀರಿದೆ ಅಂತಾ ನೋಡಬೇಕಿತ್ತು. ಕರ್ನಾಟಕ ಬಂದ್ ಗೆ ಕನ್ನಡ ಚಲನಚಿತ್ರ ರಂಗ ಬೆಂಬಲ ನೀಡಲಿದೆ ಕನ್ನಡ ಚಲನಚಿತ್ರರಂಗದ ಕಲಾವಿದರು ಸಹಾ ಬೆಂಬಲನೀಡಬೇಕು ಎಂದು ಆಗ್ರಹಿಸಿದರು. ಬಂಗಾರಪ್ಪ ತೆಗೆದುಕೊಂಡ ರೀತಿಯಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅಮ್ ಆದ್ಮಿ ಪಕ್ಷದ ಉಷಾಮೋಹನ್ ಮಾತನಾಡಿ ಕನ್ನಡ ಪರ ಸಂಘಟನೆಗಳ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ. ಅಮ್ ಆದ್ಮಿ ಪಕ್ಷ ಕನ್ನಡಪರವಾಗಿರುವುದು ನಮ್ಮ ಪಕ್ಷದ ಮುಖಂಡರ ಜತೆ ಚರ್ಚಿಸಲಾಗುತ್ತದೆ.

