ಬಸ್ ಪ್ರಯಾಣಿಕರಿಗೆ ಬಸ್ ದರ ಏರಿಕೆ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಪ್ರತಿ ಸ್ಟೇಜ್‌ಗೆ 9 ರೂ. ಏರಿಕೆ
ಹಾಲಿನ ದರ ಏರಿಕೆ ಬೆನ್ನಲ್ಲೇ ಕರ್ನಾಟಕದಲ್ಲಿ ಬಸ್ ಪ್ರಯಾಣವೂ ದುಬಾರಿ. ಇಂದಿನಿಂದಲೇ ಹೊಸ ದರ ಜಾರಿಯಾಗಲಿದ್ದು, ಕೆಎಸ್ಆರ್‌ಟಿಸಿ ಟಿಕೆಟ್ ದರ 9 ರೂ. ಹೆಚ್ಚಳವಾಗಲಿದೆ.
ಹಾಲಿನ ದರ ಹೆಚ್ಚಳ ಬೆನ್ನಲ್ಲೇ ರಾಜ್ಯದಲ್ಲಿ ಬಸ್ ಪ್ರಯಾಣ ದರ ಹೆಚ್ಚಳವನ್ನು ಮಾಡಲಾಗಿದೆ. ಟಿಕೆಟ್ ದರ ಪರಿಷ್ಕರಣೆ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲು ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ (KSRTC, BMTC, NWKRTC, KKRTC) ಅವಕಾಶ ಕಲ್ಪಿಸಿಕೊಡಲಾಗಿತ್ತು. ಇದೀಗ ಇಂದು ಮಧ್ಯಾಹ್ನ ರಾತ್ರಿಯಿಂದಲ್ಲೇ ಬೆಲೆ ಏರಿಕೆ ಆಗಲಿದೆ. ಕೆಎಸ್ಆರ್ಟಿಸಿಯಲ್ಲಿ 9 ರೂ. ಟಿಕೆಟ್ ದರ ಏರಿಕೆ ಆಗಲಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 10 ವರ್ಷಗಳ ಸುದೀರ್ಘ ಅವಧಿಯಲ್ಲಿ ರಾಜ್ಯದಲ್ಲಿ ಕೇವಲ ಒಂದು ಬಾರಿಯಷ್ಟೇ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ ಹಾಗೂ 2025ರಲ್ಲಿಯೂ ಪ್ರಯಾಣ ದರ ಏರಿಕೆ ಮಾಡಲಾಗಿತ್ತು ಎಂದು ಪ್ರಸ್ತಾಪಿಸಿದ್ದಾರೆ.
Next Story

