ರಾಜ್ಯದಲ್ಲಿ ಶೀಘ್ರವೇ ಬರ ಘೋಷಣೆ: ಸಂಪುಟ ಸಭೆಯಲ್ಲಿ ನಿರ್ಧಾರ - ಪರಮೇಶ್ವರ್ ಹೇಳಿಕೆ
x

ಜಿ. ಪರಮೇಶ್ವರ ಅವರನ್ನು ನೇಮಿಸುವಂತೆ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಶಿಫಾರಸು ಮಾಡಿದ್ದರು ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದ್ದಾರೆ. 

ರಾಜ್ಯದಲ್ಲಿ ಶೀಘ್ರವೇ ಬರ ಘೋಷಣೆ: ಸಂಪುಟ ಸಭೆಯಲ್ಲಿ ನಿರ್ಧಾರ - ಪರಮೇಶ್ವರ್ ಹೇಳಿಕೆ

ರಾಜ್ಯದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿಯ ಪರಿಶೀಲನಾ ವರದಿ ಈಗಾಗಲೇ ಸರ್ಕಾರಕ್ಕೆ ಬಂದಿದೆ. ಈ ವರದಿಯನ್ನು ಆಧರಿಸಿ, ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಾನುಸಾರ ಘೋಷಣೆಗೆ ತೀರ್ಮಾನ.


Click the Play button to hear this message in audio format

ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿಯ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು, ಶೀಘ್ರದಲ್ಲೇ ಬರಪೀಡಿತ ತಾಲೂಕುಗಳನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಸ್ತುತ ಪರಿಸ್ಥಿತಿ, ರಾಜಕೀಯ ಬೆಳವಣಿಗೆಗಳು ಮತ್ತು ಆಡಳಿತಾತ್ಮಕ ನಿರ್ಧಾರಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ರಾಜ್ಯದ 102 ತಾಲೂಕುಗಳಲ್ಲಿ ಬೆಳೆ ನಷ್ಟ ಮತ್ತು ಬರ ಪರಿಸ್ಥಿತಿಯ ಕುರಿತು ಕ್ಷೇತ್ರ ಪರಿಶೀಲನಾ ವರದಿ ಈಗಾಗಲೇ ಸರ್ಕಾರಕ್ಕೆ ಬಂದಿದೆ. ಈ ವರದಿಯನ್ನು ಆಧರಿಸಿ, ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳ ಅನುಸಾರವಾಗಿ ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಬರಪೀಡಿತ ಪ್ರದೇಶಗಳನ್ನು ಘೋಷಿಸಲಾಗುವುದು. ಪ್ರತಿ ವಾರವೂ ನಾವು ಬರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ. ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ ಎಂದು ಹೇಳಿದರು.

ವಿಪಕ್ಷಗಳ ರಾಜಕೀಯದ ವಿರುದ್ಧ ಆಕ್ರೋಶ

ರಾಜ್ಯದಲ್ಲಿ ಬರಗಾಲದಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ವಿರೋಧ ಪಕ್ಷಗಳು ರಚನಾತ್ಮಕ ಸಲಹೆಗಳನ್ನು ನೀಡುವ ಬದಲು ರಾಜಕೀಯ ಮಾಡುತ್ತಿವೆ. ಬಿಜೆಪಿ ನಾಯಕರು ಬರ ಅಧ್ಯಯನಕ್ಕೆ ತಂಡಗಳನ್ನು ಕಳುಹಿಸಿದ್ದಾರೆ ಎಂದು ಕೇಳಿದ್ದೇವೆ. ಆದರೆ ಆ ತಂಡದ ವರದಿಯನ್ನು ನಮ್ಮ ಸರ್ಕಾರಕ್ಕಾಗಲಿ ಅಥವಾ ಸ್ವತಃ ಮುಖ್ಯಮಂತ್ರಿಗಳಿಗಾಗಲಿ ಸಲ್ಲಿಸಿಲ್ಲ. ಸದನದಲ್ಲಿ ಈ ಬಗ್ಗೆ ಗಂಭೀರ ಚರ್ಚೆ ನಡೆಸುವ ಅವಕಾಶವಿದ್ದರೂ, ಅವರು ಕೇವಲ ರಾಜಕೀಯ ಪ್ರೇರಿತ ಟೀಕೆಗಳಿಗೆ ಸೀಮಿತರಾಗಿದ್ದಾರೆ ಎಂದು ಟೀಕಿಸಿದರು.

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ನಾಗೇಂದ್ರ ಅವರ ರಾಜೀನಾಮೆ ಮತ್ತು ಸಂಪುಟ ಪುನರ್‌ರಚನೆಯ ವಿಷಯದ ಕುರಿತು ಪ್ರತಿಕ್ರಿಯಿಸಿದ ಅವರು, ಇವೆಲ್ಲವೂ ಕೇವಲ ಊಹಾಪೋಹಗಳು ಎಂದರು. ಮುಖ್ಯಮಂತ್ರಿಗಳು ದೆಹಲಿಗೆ ತೆರಳಿದಾಗ ಹೈಕಮಾಂಡ್ ಜೊತೆ ಚರ್ಚೆ ನಡೆಸಬಹುದು. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ. ಚಾರ್ಜ್‌ಶೀಟ್‌ನಲ್ಲಿ ನಾಗೇಂದ್ರ ಅವರ ಹೆಸರು ಇಲ್ಲದಿರುವಾಗ, ಸಿಬಿಐ ತನಿಖೆ ಅಥವಾ ಇತರ ಕ್ರಮಗಳ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲಾಗುತ್ತದೆ ಎಂದರು.

ಬೆಂಗಳೂರಿನಲ್ಲಿ ಪಾರ್ಕಿಂಗ್ ಸಮಸ್ಯೆ, ಉದ್ಯಾನವನಗಳ ಬಳಕೆ

ರಸ್ತೆಗಳು ವಾಹನಗಳ ಸುಗಮ ಸಂಚಾರಕ್ಕಾಗಿ ಇರುವುದು. ಇಕ್ಕೆಲಗಳಲ್ಲಿ ವಾಹನಗಳನ್ನು ನಿಲ್ಲಿಸಿದರೆ ರಸ್ತೆಗಳು ಕಿರಿದಾಗಿ ಟ್ರಾಫಿಕ್ ಜಾಮ್ ಉಂಟಾಗುತ್ತದೆ. ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಇನ್ನು ಉದ್ಯಾನವನಗಳ ಶೇ. 5ರಷ್ಟು ಜಾಗವನ್ನು ಸಾರ್ವಜನಿಕ ಬಳಕೆಗೆ ನೀಡುವ ಕುರಿತು ಮಾತನಾಡಿ, ಕಾರ್ಪೊರೇಷನ್ ಯಾವ ರೀತಿಯ ಯೋಜನೆ ರೂಪಿಸುತ್ತದೆ ಎಂಬುದನ್ನು ನೋಡಬೇಕಿದೆ ಎಂದರು.

ಒಳಮೀಸಲಾತಿ ಹಾಗೂ ನ್ಯಾಯಾಲಯದ ಇತಿಮಿತಿ

ಸಿದ್ದರಾಮಯ್ಯನವರ ಮೀಸಲಾತಿ ಕುರಿತಾದ ಹೇಳಿಕೆಯನ್ನು ಬೆಂಬಲಿಸಿದ ಅವರು, ಅಸಮಾನತೆ ತೊಲಗಿಸಲು ಮೀಸಲಾತಿ ಮತ್ತು ಒಳಮೀಸಲಾತಿ ಅತ್ಯಗತ್ಯ. ದಶಕಗಳ ಹೋರಾಟದ ಫಲವಾಗಿ ನಮ್ಮ ಸರ್ಕಾರ ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಒಟ್ಟು ಮೀಸಲಾತಿ ಪ್ರಮಾಣ ಶೇ. 50ನ್ನು ಮೀರಬಾರದು ಎಂಬ ಸುಪ್ರೀಂ ಕೋರ್ಟ್ ಆದೇಶವಿರುವ ಕಾರಣ, ಕೆಲವು ಕಾನೂನು ತೊಡಕುಗಳು ಎದುರಾಗಿವೆ. ಇದರ ನಡುವೆಯೇ ನಾವು ಒಳಮೀಸಲಾತಿಯನ್ನು ಜಾರಿಗೆ ತಂದಿದ್ದೇವೆ ಎಂದು ಸ್ಪಷ್ಟಪಡಿಸಿದರು.

Read More
Next Story