Three high-tech data parks set up in the state; new momentum for digital infrastructure
x

ಎಐ ಆಧಾರಿತ ಚಿತ್ರ

ರಾಜ್ಯದಲ್ಲಿ ಮೂರು ಹೈಟೆಕ್ ಡೇಟಾ ಪಾರ್ಕ್ ಸ್ಥಾಪನೆ; ಡಿಜಿಟಲ್ ಮೂಲಸೌಕರ್ಯಕ್ಕೆ ಹೊಸ ವೇಗ

ಮಂಗಳೂರಿನಲ್ಲಿ ಡೇಟಾ ಪಾರ್ಕ್ ಸ್ಥಾಪನೆಗೆ ಭೂಮಿಯು ಲಭ್ಯವಿದೆ. ನಗರದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಕೆಐಎಡಿಬಿಗೆ ಸೇರಿದ 350 ಎಕರೆ ಜಾಗ ಲಭ್ಯವಿದೆ. ಮೈಸೂರಿನಲ್ಲಿ ಈ ಉದ್ದೇಶಕ್ಕೆ ಸೂಕ್ತ ಜಾಗ ಗುರುತಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.


Click the Play button to hear this message in audio format

ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ ಡೇಟಾ ಕೇಂದ್ರಗಳು (ಸಸ್ಟೇನಬಲ್ ಡೇಟಾ ಸೆಂಟರ್ಸ್) ಅಗತ್ಯವಿದ್ದು ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಡೇಟಾ ಪಾರ್ಕ್ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಬೆಂಗಳೂರಿನ ಹೊಸಕೋಟೆಯ ಸಮೀಪ 500 ಮೆಗಾವ್ಯಾಟ್ ಸಾಮರ್ಥ್ಯದ ಸುಸ್ಥಿರ ಡೇಟಾ ಕೇಂದ್ರ ಪಾರ್ಕ್ ಸ್ಥಾಪಿಸಲಾಗುವುದು. ಪಾವಗಡದಿಂದ ಪೂರೈಕೆಯಾಗುವ ಸೌರ ವಿದ್ಯುತ್ ನೇರವಾಗಿ ಇಲ್ಲಿಗೆ ತಲುಪುತ್ತದೆ. ಜತೆಗೆ, ಬೆಂಗಳೂರು ಜಲ‌ ಮಂಡಳಿಯು ಎರಡು ಹಂತಗಳಲ್ಲಿ ಸಂಸ್ಕರಿಸಿದ 60 ಎಂಎಲ್‌ಡಿ ನೀರು ಪೂರೈಕೆಗೆ ತೊಂದರೆ ಇಲ್ಲ. ಸ್ವತಃ ಉದ್ಯಮಗಳೇ ನೀರಿನ ಮೂರನೇ ಹಂತದ ಶುದ್ಧೀಕರಣ ಮಾಡಿಕೊಳ್ಳುತ್ತವೆ. ಈ ಮೂರೂ ಪಾರ್ಕುಗಳ ಒಟ್ಟು ಸಾಮರ್ಥ್ಯ 1,000 ಮೆಗಾವ್ಯಾಟ್ ಇರಲಿದೆ.

ಮಂಗಳೂರಿನಲ್ಲಿ ಡೇಟಾ ಪಾರ್ಕ್ ಸ್ಥಾಪನೆಗೆ ಭೂಮಿಯು ಲಭ್ಯವಿದೆ. ನಗರದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಕೆಐಎಡಿಬಿಗೆ ಸೇರಿದ 350 ಎಕರೆ ಜಾಗ ಲಭ್ಯವಿದೆ. ಮೈಸೂರಿನಲ್ಲಿ ಈ ಉದ್ದೇಶಕ್ಕೆ ಸೂಕ್ತ ಜಾಗ ಗುರುತಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಈ ಡೇಟಾ ಪಾರ್ಕ್ ಗಳಲ್ಲಿ ಯಾರೇ ಬಂದು ಡಾಟಾ ಸೆಂಟರ್ ಸ್ಥಾಪನೆಗೆ ಹೂಡಿಕೆ ಮಾಡಿದರೆ ಅವರಿಗೆ ವಿದ್ಯುತ್ ಮತ್ತು ನೀರು ನೀಡಲಾಗುವುದು. ಇದಕ್ಕೆ ಪೂರಕವಾದ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ತ್ವರಿತವಾಗಿ ಈ ಡೇಟಾ ಪಾರ್ಕುಗಳನ್ನು ಸ್ಥಾಪಿಸಲಾಗುವುದು. ಸದ್ಯದಲ್ಲೇ ಹೂಡಿಕೆದಾರರ ಜತೆಗೂ ಸಭೆ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ಸುಸ್ಥಿರ ಡಾಟಾ ಪಾರ್ಕ್‌ ಎಂದರೇನು ?

ಸುಸ್ಥಿರ ಡೇಟಾ ಪಾರ್ಕ್ ಎಂದರೆ ಪರಿಸರ ಸ್ನೇಹಿ ತಂತ್ರಜ್ಞಾನಗಳು ಮತ್ತು ನವೀಕರಿಸಬಹುದಾದ ಇಂಧನ ಮೂಲಗಳನ್ನು ಬಳಸಿ, ಡೇಟಾ ಸಂಗ್ರಹಣೆ ಮತ್ತು ಸಂಸ್ಕರಣೆಯನ್ನು ಅತ್ಯಂತ ಕಡಿಮೆ ಇಂಗಾಲದ ಹೊರಸೂಸುವಿಕೆಯೊಂದಿಗೆ ನಿರ್ವಹಿಸುವ ಸುಧಾರಿತ ದತ್ತಾಂಶ ಕೇಂದ್ರಗಳಾಗಿವೆ.

ಪರಿಸರ ಸ್ನೇಹಿ ಕೂಲಿಂಗ್‌

ಸುಸ್ಥಿರ ಡೇಟಾ ಪಾರ್ಕ್‌ನ ಪ್ರಮುಖ ಲಕ್ಷಣಗಳೆಂದರೆ, ಇವುಗಳಿಗೆ ಅಗತ್ಯವಿರುವ ವಿದ್ಯುತ್ ಅನ್ನು ಹೆಚ್ಚಾಗಿ ಸೌರಶಕ್ತಿ ಅಥವಾ ಪವನಶಕ್ತಿಯಂತಹ ನವೀಕರಿಸಬಹುದಾದ ಮೂಲಗಳಿಂದ ಪಡೆಯಲಾಗುತ್ತದೆ ಉದಾಹರಣೆಗೆ, ಪಾವಗಡ ಸೌರ ಉದ್ಯಾನದಿಂದ ವಿದ್ಯುತ್ ಪೂರೈಕೆ. ಸಾಂಪ್ರದಾಯಿಕ ಎಸಿಗಳ ಬದಲಿಗೆ, ಕಡಿಮೆ ವಿದ್ಯುತ್ ಬಳಸುವ ಮತ್ತು ಪರಿಸರ ಸ್ನೇಹಿ ಕೂಲಿಂಗ್ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳಲಾಗುತ್ತದೆ ಸರ್ವರ್‌ಗಳನ್ನು ತಂಪಾಗಿಸಲು ಸಂಸ್ಕರಿಸಿದ ನೀರನ್ನು ಬಳಸಲಾಗುತ್ತದೆ. ಇಂಗಾಲದ ಹೊರಸೂಸುವಿಕೆಯನ್ನು ಗರಿಷ್ಠ ಮಟ್ಟಕ್ಕೆ ತಗ್ಗಿಸಿ, ಹಸಿರು ತಂತ್ರಜ್ಞಾನಕ್ಕೆ ಆದ್ಯತೆ ನೀಡಲಾಗುತ್ತದೆ.

Read More
Next Story