Monsoon in the state: Orange alert for the coast, Yellow alert forecast for 10 districts!
x

ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಮುಂಗಾರು ಆರ್ಭಟ: ಕರಾವಳಿಗೆ ಆರೆಂಜ್ ಅಲರ್ಟ್, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮುನ್ಸೂಚನೆ!

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ವರುಣನ ಆರ್ಭಟ ತೀವ್ರವಾಗಿರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.


Click the Play button to hear this message in audio format

ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ವಿಶೇಷವಾಗಿ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಜನಜೀವನ ಅಸ್ತವ್ಯಸ್ತಗೊಳ್ಳುವ ಭೀತಿ ಎದುರಾಗಿದೆ.

ಕರಾವಳಿಗೆ 'ಆರೆಂಜ್ ಅಲರ್ಟ್' ಭೀತಿ

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ವರುಣನ ಆರ್ಭಟ ತೀವ್ರವಾಗಿರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ನಿರಂತರವಾಗಿ ಗಾಳಿ ಬೀಸಲಿದ್ದು, ಕಡಲು ಪ್ರಕ್ಷುಬ್ಧಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

10 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಜಾರಿ

ರಾಜ್ಯದ ಒಟ್ಟು 10 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಬಿರುಗಾಳಿ ಮತ್ತು ಗುಡುಗಿನ ಸಂದರ್ಭದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನಲ್ಲಿ ಭಾರಿ ಮಳೆ, ಬಿರುಗಾಳಿ

ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯ ಪ್ರಭಾವ ಹೆಚ್ಚಿರಲಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿ. ಮೀ. ವೇಗದಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

Read More
Next Story