x

ಬಯಲುಸೀಮೆಯಲ್ಲಿ ಬಿರುಗಾಳಿ, ಮಲೆನಾಡಿನಲ್ಲಿ ಮಳೆ

ದಿನವಿಡೀ ಮೋಡಕವಿದ ವಾತಾವರಣದೊಂದಿಗೆ ಚಳಿ ಗಾಳಿ ಬೀಸಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ತಿಳಿಸಿದೆ.


Click the Play button to hear this message in audio format

ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯೊಂದಿಗೆ ಕರಾವಳಿಯ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡಕ್ಕೆ ಹವಾಮಾನ ಇಲಾಖೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಇಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ. ಇನ್ನೊಂದೆಡೆ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವೆಡೆ ಗಾಳಿ ಸಹಿತ ಲಘು ಮಳೆಯಾಗಲಿದ್ದರೆ, ಬೆಂಗಳೂರು ಸೇರಿದಂತೆ ಬಯಲುಸೀಮೆಯ ಜಿಲ್ಲೆಗಳಲ್ಲಿ ಮಳೆಗಿಂತ ಬಿರುಗಾಳಿಯ ತೀವ್ರತೆ ಹೆಚ್ಚಿರಲಿದೆ. ದಿನವಿಡೀ ಮೋಡಕವಿದ ವಾತಾವರಣದೊಂದಿಗೆ ಚಳಿ ಗಾಳಿ ಬೀಸಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ತಿಳಿಸಿದೆ.

Read More
Next Story