ರಾಜ್ಯಾದ್ಯಂತ ವಾಟರ್ ಘಟಕಗಳ ಮೇಲೆ ದಾಳಿ; 24 ಘಟಕಗಳಿಗೆ ನೋಟಿಸ್
ರಾಜ್ಯಾದ್ಯಂತ 45 ಪ್ಯಾಕೇಜ್ಡ್ ನೀರಿನ ಘಟಕಗಳ ತಪಾಸಣೆ ನಡೆಸಿ, ನಿಯಮ ಉಲ್ಲಂಘಿಸಿದ 24 ಘಟಕಗಳಿಗೆ ನೋಟಿಸ್ ನೀಡಲಾಗಿದೆ. 32 ನೀರಿನ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ರಾಜ್ಯಾದ್ಯಂತ ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 45 ಘಟಕಗಳನ್ನು ತಪಾಸಣೆ ಮಾಡಲಾಗಿದ್ದು, ನಿಯಮ ಉಲ್ಲಂಘಿಸಿದ 24 ಘಟಕಗಳಿಗೆ ನೋಟಿಸ್ ನೀಡಲಾಗಿದೆ. ಕೋಲಾರದ ಮುಳಬಾಗಿಲಿನಲ್ಲಿ ಸ್ವಚ್ಛತೆಯ ಕೊರತೆಯಿಂದ ಒಂದು ಘಟಕವನ್ನು ಮುಚ್ಚಲಾಗಿದೆ. 32 ನೀರಿನ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ನೀವು ಕುಡಿಯುವ ಬಾಟಲಿ ನೀರಿನ ಗುಣಮಟ್ಟದ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ.
Next Story

