
ರಾಜ್ಯಾದ್ಯಂತ 45 ಪ್ಯಾಕೇಜ್ಡ್ ನೀರಿನ ಘಟಕಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ನಿಯಮ ಉಲ್ಲಂಘಿಸಿದ 24 ಘಟಕಗಳಿಗೆ ನೋಟಿಸ್ ನೀಡಿದ್ದಾರೆ. ಮುಳಬಾಗಿಲಿನಲ್ಲಿ ಒಂದು ಘಟಕ ಬಂದ್ ಆಗಿದೆ.
ನೀವು ಕುಡಿಯುವ ಬಾಟಲಿ ನೀರು ಸೇಫಾ? 45 ಘಟಕಗಳ ಮೇಲೆ ದಾಳಿ
ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಸ್ವಚ್ಛತೆಯ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಒಂದು ನೀರಿನ ಘಟಕವನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಮೈಸೂರು ಮತ್ತು ದಾವಣಗೆರೆಯಲ್ಲೂ ತಪ್ಪು ಲೇಬಲ್ ಹೊಂದಿದ್ದ ನೀರಿನ ಬಾಟಲಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ರಾಜ್ಯಾದ್ಯಂತ ಪ್ಯಾಕೇಜ್ಡ್ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ಅನುಮಾನ ಮೂಡಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಗುರುವಾರ ರಾಜ್ಯದ ವಿವಿಧೆಡೆ ನೀರಿನ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಒಟ್ಟು 45 ಘಟಕಗಳನ್ನು ತಪಾಸಣೆ ಮಾಡಲಾಗಿದ್ದು, ನಿಯಮ ಉಲ್ಲಂಘಿಸಿದ 24 ಘಟಕಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ತಪಾಸಣೆ ವೇಳೆ ಹಲವು ಘಟಕಗಳಲ್ಲಿ ಗಂಭೀರ ಲೋಪದೋಷಗಳು ಕಂಡುಬಂದಿವೆ. ಕೆಲವು ಘಟಕಗಳ ಸಿಬ್ಬಂದಿ ವೈದ್ಯಕೀಯ ಪ್ರಮಾಣಪತ್ರ ಹೊಂದಿರದಿರುವುದು, ನೀರಿನ ಬಾಟಲಿಗಳ ಲೇಬಲ್‌ನಲ್ಲಿ ಅಗತ್ಯ ಮಾಹಿತಿಯನ್ನು ನಮೂದಿಸದಿರುವುದು ಹಾಗೂ ಕೀಟ ನಿಯಂತ್ರಣ ಪ್ರಮಾಣಪತ್ರ ಇಲ್ಲದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.
ಇದಲ್ಲದೆ, ನೀರಿನ ಗುಣಮಟ್ಟ ಪರಿಶೀಲಿಸುವ ಉದ್ದೇಶದಿಂದ ಒಟ್ಟು 32 ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಮುಳಬಾಗಿಲಿನಲ್ಲಿ ನೀರಿನ ಘಟಕಕ್ಕೆ ಬೀಗಮುದ್ರೆ
ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಸ್ವಚ್ಛತೆಯ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಒಂದು ನೀರಿನ ಘಟಕವನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಮೈಸೂರು ಮತ್ತು ದಾವಣಗೆರೆಯಲ್ಲೂ ತಪ್ಪು ಲೇಬಲ್ ಹೊಂದಿದ್ದ ನೀರಿನ ಬಾಟಲಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ತಪಾಸಣೆ ವೇಳೆ ಪತ್ತೆಯಾದ ಲೋಪದೋಷಗಳ ಹಿನ್ನೆಲೆಯಲ್ಲಿ ಒಂದು ಘಟಕವನ್ನು ಸೀಜ್ ಮಾಡಲಾಗಿದ್ದು, ಉಳಿದ ಘಟಕಗಳಿಗೆ ಅಗತ್ಯ ಸುಧಾರಣೆಗಳನ್ನು ಕೈಗೊಳ್ಳುವಂತೆ ನೋಟಿಸ್ ನೀಡಲಾಗಿದೆ. ಸಾರ್ವಜನಿಕರಿಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಲಭ್ಯವಾಗುವಂತೆ ನೋಡಿಕೊಳ್ಳಲು ಈ ಕಾರ್ಯಾಚರಣೆ ನಡೆಸಲಾಗಿದೆ.

