ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ: ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್‌ ಘೋಷಣೆ
x

 ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ

ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ: ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್‌ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 30ರಿಂದ 40 ಕಿ.ಮೀ. ಇರಬಹುದು. ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನಷ್ಟು ಬಿರುಸಿನ ಗಾಳಿ ಬೀಸುವ ಸಾಧ್ಯತೆಯಿದ್ದು ಎಂದು ಮುನ್ಸೂಚನೆ ನೀಡಲಾಗಿದೆ.


Click the Play button to hear this message in audio format

ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಕರಾವಳಿ ಕರ್ನಾಟಕದ ಬಹುತೇಕ ಭಾಗಗಳು, ದಕ್ಷಿಣ ಒಳನಾಡಿನ ಹಲವು ಪ್ರದೇಶಗಳು ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಆಗಸ್ಟ್ 24ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 30ರಿಂದ 40 ಕಿ.ಮೀ. ಇರಬಹುದು. ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನಷ್ಟು ಬಿರುಸಿನ ಗಾಳಿ ಬೀಸುವ ಸಾಧ್ಯತೆಯಿದ್ದು, ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲೂ ಭಾರಿ ಮಳೆಯ ಸಾಧ್ಯತೆ ಇದೆ. ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಬಹುದು.

ಬೆಂಗಳೂರಿಗೂ ಮಳೆಯ ಮುನ್ಸೂಚನೆ

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಕೆಲವೆಡೆ ಸಾಧಾರಣ ಮಳೆಯ ನಿರೀಕ್ಷೆಯಿದೆ.

ಉತ್ತರ ಒಳನಾಡಿನಲ್ಲೂ ಮಳೆ, ಗಾಳಿ

ಉತ್ತರ ಒಳನಾಡಿನ ವಿಜಯಪುರ, ರಾಯಚೂರು, ಧಾರವಾಡ, ಗದಗ, ಕಲಬುರಗಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಬೆಳಗಾವಿ, ಬೀದರ್, ಹಾವೇರಿ, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವು ಭಾಗಗಳಲ್ಲೂ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ.

ಆಗಸ್ಟ್ 25ರಂದು ಭಾರೀ ಮಳೆ

ಆಗಸ್ಟ್ 25ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲೂ ಮಳೆಯ ತೀವ್ರತೆ ಮುಂದುವರಿಯುವ ನಿರೀಕ್ಷೆಯಿದೆ. ವಿಜಯಪುರ, ರಾಯಚೂರು, ಧಾರವಾಡ, ಗದಗ, ಕಲಬುರಗಿ ಹಾಗೂ ಬಾಗಲಕೋಟೆ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗಬಹುದು. ಬೆಳಗಾವಿ, ಬೀದರ್, ಹಾವೇರಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯ ಮುನ್ಸೂಚನೆ ಇದೆ.

Read More
Next Story