Heavy rains in Malnad: Yellow alert for 8 districts including coastal areas, lifeline for KRS
x

ಸೆಪ್ಟೆಂಬರ್ 24ರಂದು ಕರಾವಳಿ ಕರ್ನಾಟಕದಲ್ಲಿ ಅತಿ ಭಾರಿ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ.

ಕರ್ನಾಟಕದಲ್ಲಿ 3 ದಿನ ಮಳೆ ಅಬ್ಬರ; ಕರಾವಳಿಗೆ ರೆಡ್ ಅಲರ್ಟ್

ಸೆಪ್ಟೆಂಬರ್ 23ರಂದು ಕರ್ನಾಟಕದಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.


Click the Play button to hear this message in audio format

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 23ರಂದು ಕರ್ನಾಟಕದಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರಾವಳಿಗೆ ಗುರುವಾರ ರೆಡ್ ಅಲರ್ಟ್

ಸೆಪ್ಟೆಂಬರ್ 24ರಂದು ಕರಾವಳಿ ಕರ್ನಾಟಕದಲ್ಲಿ ಅತಿ ಭಾರಿ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡು ಕರ್ನಾಟಕದಲ್ಲೂ ಭಾರಿ ಮಳೆಯ ಮುನ್ಸೂಚನೆ ಇದ್ದು, ಕೆಲವು ಪ್ರದೇಶಗಳಲ್ಲಿ ಮಳೆ ತೀವ್ರವಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 25ರಂದು ಕೂಡ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಐಎಂಡಿ ತಿಳಿಸಿದೆ.

ಒಣಹವೆ ಬಳಿಕ ಮತ್ತೆ ಮಳೆ

ಇತ್ತೀಚಿನ ದಿನಗಳಲ್ಲಿ ಕರ್ನಾಟಕದ ಹಲವು ಭಾಗಗಳಲ್ಲಿ ಲಘು ಹಾಗೂ ಸಾಧಾರಣ ಮಳೆಯಾಗಿತ್ತು. ಅದಕ್ಕೂ ಮುನ್ನ ರಾಜ್ಯದ ಬಹುತೇಕ ಭಾಗಗಳಲ್ಲಿ ದೀರ್ಘಕಾಲ ಒಣಹವೆ ಮುಂದುವರಿದಿತ್ತು. ಇದೀಗ ವಾಯುಭಾರ ಕುಸಿತದ ಪರಿಣಾಮ ಮಳೆ ಚುರುಕಾಗುವ ಸಾಧ್ಯತೆ ಇದೆ.

Read More
Next Story