SIR ಫಾರ್ಮ್-7 ವಿರುದ್ಧ ಡಿಕೆಶಿ ಸ್ಫೋಟಕ ಆರೋಪ
ಎಸ್ಐಆರ್ ವೇಳೆ ಫಾರ್ಮ್-7 ದುರುಪಯೋಗದ ಮೂಲಕ 50 ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ಅಳಿಸಲಾಗಿದೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದ್ದು, ಮತದಾರರು ತಮ್ಮ ಹೆಸರು ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ.
ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಭಾರೀ ಪ್ರಮಾಣದ ಅಕ್ರಮ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೊ ಸಂದೇಶದ ಮೂಲಕ ಬಿಜೆಪಿ ನಾಯಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಎಸ್ಐಆರ್ ಪ್ರಕ್ರಿಯೆಯ ನಡುವೆ ಫಾರ್ಮ್-7 ಅರ್ಜಿಗಳ ದುರುಪಯೋಗ ಮಾಡಲಾಗುತ್ತಿದೆ. ಇದರ ಮೂಲಕ ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮತದಾರರನ್ನು ಗುರಿಯಾಗಿಸಿಕೊಂಡು ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ ಎಂಬುದು ಅವರ ಮತ್ತೊಂದು ಪ್ರಮುಖ ಆರೋಪ. ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ, ಫಾರ್ಮ್-7 ಮೂಲಕ ತಮ್ಮ ಹೆಸರಿನ ವಿರುದ್ಧ ಯಾವುದೇ ಅರ್ಜಿ ಸಲ್ಲಿಕೆಯಾಗಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು ಎಂದು ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.
Next Story

