x

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ- 2 ದಿನ ಭಾರಿ ಮಳೆ ಮುನ್ಸೂಚನೆ, ಈ ಜಿಲ್ಲೆಗಳಿಗೆ ಎಚ್ಚರಿಕೆ

ಕರ್ನಾಟಕದಲ್ಲಿ ನವೆಂಬರ್ 4 ಮತ್ತು 5ರಂದು ಭಾರಿ ಮಳೆಯ ಮುನ್ಸೂಚನೆ ಇದೆ. ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಹಾಗೂ ಬಿರುಗಾಳಿ ಬೀಸುವ ಸಾಧ್ಯತೆಯಿದೆ.


Click the Play button to hear this message in audio format

ಕರ್ನಾಟಕದಲ್ಲಿ ನವೆಂಬರ್ 4 ಮತ್ತು 5ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಬಿರುಗಾಳಿ ಎಚ್ಚರಿಕೆ ನೀಡಲಾಗಿದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Read More
Next Story