
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಅಕ್ಟೋಬರ್ 9 ಮತ್ತು 10ರಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಅಬ್ಬರ; ಹವಾಮಾನ ಇಲಾಖೆಯಿಂದ ಎಚ್ಚರಿಕೆ
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 9ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಬದಲಾವಣೆಯ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆ ವಹಿಸಬೇಕಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 9ರಂದು ಈ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಪರಿಸ್ಥಿತಿಯ ಮೇಲೆ ನಿಗಾ ಇರಿಸಲಾಗಿದೆ.
ಬೆಂಗಳೂರಿನಲ್ಲೂ ಮಳೆಯ ಮುನ್ಸೂಚನೆ
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಅಕ್ಟೋಬರ್ 9 ಮತ್ತು 10ರಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿಯೂ ಮಳೆಯಾಗಬಹುದು. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಕಡೆ ಮಳೆಯ ನಿರೀಕ್ಷೆಯಿದೆ.
ಉತ್ತರ ಒಳನಾಡಿನಲ್ಲಿ ಒಣಹವೆ
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಮುಖ್ಯವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ.

