ಬೆಂಗಳೂರಿನಲ್ಲಿ ಚಳಿಯ ನಡುವೆ ಮಳೆ ಎಂಟ್ರಿ | 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ರಾಜ್ಯದಲ್ಲಿ ಚಳಿಯ ನಡುವೆ ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ನವೆಂಬರ್ 24, 25ರಂದು ಮಳೆಯ ಮುನ್ಸೂಚನೆ ನೀಡಲಾಗಿದೆ. ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದಲ್ಲಿ ಮೈಕೊರೆಯುವ ಚಳಿಯ ನಡುವೆ ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ನವೆಂಬರ್ 24 ಮತ್ತು 25ರಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಎರಡು ದಿನ ಹವಾಮಾನದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ.
Next Story

