Karnataka Weather | ಬೆಂಗಳೂರು ಸೇರಿ ಹಲವೆಡೆ ಇಂದು ಕೂಡ ಗುಡುಗು ಸಹಿತ ಮಳೆ ಸಾಧ್ಯತೆ
x
ಬೆಂಗಳೂರು ಮಳೆ(ಸಂಗ್ರಹ ಚಿತ್ರ)

Karnataka Weather | ಬೆಂಗಳೂರು ಸೇರಿ ಹಲವೆಡೆ ಇಂದು ಕೂಡ ಗುಡುಗು ಸಹಿತ ಮಳೆ ಸಾಧ್ಯತೆ

ಉತ್ತರ ಕರ್ನಾಟಕದಲ್ಲಿ 40 ಡಿಗ್ರಿ ದಾಟಿದ ಬಿಸಿಲು. ಬೆಂಗಳೂರು ಹಾಗೂ ದಕ್ಷಿಣ ಒಳನಾಡಿನಲ್ಲಿ ಸಂಜೆ ಮಳೆ ಸಾಧ್ಯತೆ. ಕರಾವಳಿಗೆ ಬಿಸಿ ಗಾಳಿಯ ಎಚ್ಚರಿಕೆ.


ರಾಜ್ಯದಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನತೆ ಸೆಕೆಯಿಂದ ಹೈರಾಣಾಗಿದ್ದಾರೆ. ಇಂದು ಕೂಡ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ದಾಖಲಾಗಲಿದ್ದು, ಕೆಲವು ಭಾಗಗಳಲ್ಲಿ ಮಾತ್ರ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕದಲ್ಲಿ ಕೆಂಡದಂತಹ ಬಿಸಿಲು

ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ ಮತ್ತು ಬೀದರ್ನಲ್ಲಿ ತಾಪಮಾನ ಗರಿಷ್ಠ ಮಟ್ಟಕ್ಕೆ ತಲುಪಲಿದ್ದು, ಸುಮಾರು 39ರಿಂದ 40 ಡಿಗ್ರಿ ಸೆಲ್ಸಿಯಸ್ವರೆಗೆ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ಧಾರವಾಡ ಭಾಗಗಳಲ್ಲಿ ಬಿಸಿ ಗಾಳಿಯ (Heat Wave) ವಾತಾವರಣ ಮುಂದುವರಿಯಲಿದೆ.

ಕರಾವಳಿಗೆ ಬಿಸಿ ಗಾಳಿ ಮತ್ತು ತೇವಾಂಶದ ಎಚ್ಚರಿಕೆ

ಕರಾವಳಿ ಜಿಲ್ಲೆಗಳಾದ ಮಂಗಳೂರು, ಕಾರವಾರ ಮತ್ತು ಉಡುಪಿಯಲ್ಲಿ ಬಿಸಿಲು ಹಾಗೂ ತೇವಾಂಶದ ಪ್ರಮಾಣ ಹೆಚ್ಚಿರಲಿದೆ. ವಿಶೇಷವಾಗಿ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತೀವ್ರ ತಾಪಮಾನ ಇರಲಿದ್ದು, ಹವಾಮಾನ ಇಲಾಖೆಯು ಬಿಸಿ ಗಾಳಿ ಮತ್ತು ತೇವಾಂಶದ ಎಚ್ಚರಿಕೆಯನ್ನು ನೀಡಿದೆ. ಈ ಭಾಗದ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯೂ ಇದೆ.

ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ

ಮೈಸೂರು, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಹಗಲಿನ ತಾಪಮಾನ 36-38 ಡಿಗ್ರಿ ಸೆಲ್ಸಿಯಸ್ವರೆಗೆ ಇರಲಿದೆ.

ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ?

ರಾಜಧಾನಿ ಬೆಂಗಳೂರಿನಲ್ಲಿ ಹಗಲಿನ ವೇಳೆ ಸೆಕೆಯ ಅನುಭವ ಮುಂದುವರಿಯಲಿದೆ. ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಆದರೆ, ನಗರದ ಕೆಲವು ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ ಇದೆ?

ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸಂಜೆ ವೇಳೆ ಗಾಳಿಯೊಂದಿಗೆ ಲಘು ಅಥವಾ ಮಧ್ಯಮ ಮಳೆಯಾಗಬಹುದು. ಮೈಸೂರು, ಚಾಮರಾಜನಗರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಂಭವವಿದೆ. ಇನ್ನು ದಕ್ಷಿಣ ಕನ್ನಡ ಮತ್ತು ಉಡುಪಿಯ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗುವ ಅಂದಾಜಿದೆ.

Read More
Next Story