Job News | SSLC passed? Golden opportunity in the High Court!
x

ಕರ್ನಾಟಕ ಹೈಕೋರ್ಟ್‌

ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ; ಎಸ್ಐಟಿ ರಚಿಸಿ ಹೈಕೋರ್ಟ್ ಆದೇಶ

ಕೆಪಿಎಸ್‌ಸಿ ಅಕ್ರಮಗಳ ಕುರಿತು ಸಿಐಡಿ, ಇಡಿ ತನಿಖೆ ನಡೆಸುತ್ತಿರುವ ಬೆನ್ನಲ್ಲೇ ಹೈಕೋರ್ಟ್‌ ನೇರವಾಗಿ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿರುವುದು ತೀವ್ರ ಕುತೂಹಲ ಮೂಡಿಸಿದೆ.


ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆದಿರುವ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕರಣದ ಸಮಗ್ರ ತನಿಖೆಗೆ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆ ಮಾಡಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಕರಣ ಕುರಿತಂತೆ ಸಿಐಡಿ, ಇಡಿ ತನಿಖೆ ನಡೆಸುತ್ತಿರುವ ಬೆನ್ನಲ್ಲೇ ಹೈಕೋರ್ಟ್‌ ನೇರವಾಗಿ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ಸೋಮವಾರ ಕೆಪಿಎಸ್ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕರಣದ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಹಗರಣದ ವ್ಯಾಪ್ತಿ, ಪ್ರಕರಣದ ಹಿಂದಿರುವ ರೂವಾರಿಗಳು ಹಾಗೂ ನೈಜ ಸತ್ಯಾಸತ್ಯತೆ ಹೊರಹಾಕಲು ಎಸ್ಐಟಿಗೆ ಹೈಕೋರ್ಟ್ ಸೂಚಿಸಿದೆ. ಪರೀಕ್ಷೆಗೂ ಮುನ್ನ ಅಭ್ಯರ್ಥಿಗಳನ್ನು ಬೆಂಗಳೂರಿನ ಹೊರವಲಯದ ರೆಸಾರ್ಟ್‌ಗಳಿಗೆ ಕರೆಸಿ ಪ್ರಶ್ನೆಪತ್ರಿಕೆ ನೀಡಿ ಉತ್ತರ ಬರೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ಸಂಗ್ರಹಿಸಿರುವುದು, ಅದನ್ನು ಚಿನ್ನಾಭರಣ ಖರೀದಿ ಹಾಗೂ ವಿಮಾನ ಪ್ರಯಾಣಗಳಿಗೆ ಬಳಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕೆಪಿಎಸ್ಸಿಯ ಉನ್ನತ ಅಧಿಕಾರಿಗಳು ಹಾಗೂ ಪ್ರಭಾವಿ ಮಧ್ಯವರ್ತಿಗಳ ನಡುವಿನ ನಂಟು ಈ ಹಗರಣದ ಮೂಲಕ ಹೊರಬಿದ್ದಿದ್ದು, ತನಿಖಾ ಸಂಸ್ಥೆಗಳು ಸಾಕ್ಷ್ಯಾಧಾರಗಳನ್ನು ಕಲೆಹಾಕುತ್ತಿವೆ.

ಇಂತಹ ಸಂದರ್ಭದಲ್ಲೇ ಹಗರಣದ ಕಳಂಕಿತರು ಮತ್ತು ಸತ್ಯಾಸತ್ಯತೆ ಮರೆಮಾಚಲು ಯತ್ನಿಸುತ್ತಿರುವ ಜಾಲವನ್ನು ಸಂಪೂರ್ಣವಾಗಿ ಭೇದಿಸಿ, ತನಿಖೆಯನ್ನು ನಿಖರ ಹಾಗೂ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವಂತೆ ಎಸ್ಐಟಿ ತಂಡಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

Read More
Next Story