ಶ್ವಾಸಕೋಶದ ಸೋಂಕು; ಎಲ್.ಕೆ. ಅಡ್ವಾಣಿ ಅಪೋಲೋ ಆಸ್ಪತ್ರೆಗೆ ದಾಖಲು
x

ಶ್ವಾಸಕೋಶದ ಸೋಂಕು; ಎಲ್.ಕೆ. ಅಡ್ವಾಣಿ ಅಪೋಲೋ ಆಸ್ಪತ್ರೆಗೆ ದಾಖಲು

ಆಸ್ಪತ್ರೆಯ ವೈದ್ಯಕೀಯ ವರದಿಗಳ ಪ್ರಕಾರ, ಅವರ ಆರೋಗ್ಯ ಸ್ಥಿತಿ ಸದ್ಯಕ್ಕೆ ಸ್ಥಿರವಾಗಿದೆ. ತಜ್ಞ ವೈದ್ಯರ ತಂಡವು ನಿರಂತರವಾಗಿ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ.


Click the Play button to hear this message in audio format

ಭಾರತೀಯ ಜನತಾ ಪಕ್ಷದ (ಬಿಜೆಪಿ) ಭದ್ರ ಬುನಾದಿ ಹಾಕಿದ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರು ಆರೋಗ್ಯದ ಸಮಸ್ಯೆಯಿಂದಾಗಿ ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. 98 ವರ್ಷದ ಈ ಧೀಮಂತ ನಾಯಕ ಶ್ವಾಸಕೋಶಕ್ಕೆ ಸಂಬಂಧಿಸಿದ ಸೋಂಕಿನಿಂದ ಬಳಲುತ್ತಿದ್ದು, ವೈದ್ಯರ ತೀವ್ರ ನಿಗಾದಲ್ಲಿದ್ದಾರೆ.

ಆಸ್ಪತ್ರೆಯ ವೈದ್ಯಕೀಯ ವರದಿಗಳ ಪ್ರಕಾರ, ಅವರ ಆರೋಗ್ಯ ಸ್ಥಿತಿ ಸದ್ಯಕ್ಕೆ ಸ್ಥಿರವಾಗಿದೆ. ತಜ್ಞ ವೈದ್ಯರ ತಂಡವು ನಿರಂತರವಾಗಿ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ. ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣದಿಂದ ಅವರನ್ನು ಶ್ವಾಸಕೋಶದ ವಿಭಾಗಕ್ಕೆ ದಾಖಲಿಸಲಾಗಿದ್ದು, ಸೂಕ್ತ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಅಡ್ವಾಣಿ ಅವರ ಆರೋಗ್ಯದ ಬಗ್ಗೆ ಯಾವುದೇ ಆತಂಕ ಪಡಬೇಕಿಲ್ಲ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಈ ಹಿಂದೆ ಕೂಡ ಅಡ್ವಾಣಿ ಅವರು ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಮೇ ತಿಂಗಳಲ್ಲಿ ಮತ್ತು 2023ರ ಡಿಸೆಂಬರ್‌ನಲ್ಲಿ ಅವರು ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಅವರ ಅನಾರೋಗ್ಯದ ಸುದ್ದಿ ತಿಳಿಯುತ್ತಿದ್ದಂತೆ ದೇಶದ ಪ್ರಮುಖ ರಾಜಕೀಯ ನಾಯಕರು ಮತ್ತು ಹಿತೈಷಿಗಳು ಅಡ್ವಾಣಿ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ರಾಜಕೀಯ ಪಯಣ

ಲಾಲ್ ಕೃಷ್ಣ ಅಡ್ವಾಣಿ ಅವರು ಕೇವಲ ಒಂದು ಪಕ್ಷದ ನಾಯಕರಲ್ಲ, ಬದಲಾಗಿ ಭಾರತದ ಆಧುನಿಕ ರಾಜಕೀಯ ಇತಿಹಾಸದ ಒಂದು ಪ್ರಮುಖ ಭಾಗವಾಗಿದ್ದಾರೆ. 1980ರಲ್ಲಿ ಜನಸಂಘದ ಅವಶೇಷಗಳ ಮೇಲೆ ಬಿಜೆಪಿ ಸ್ಥಾಪನೆಯಾದಾಗ, ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಪಕ್ಷವನ್ನು ಕಟ್ಟಿ ಬೆಳೆಸಿದವರು ಅಡ್ವಾಣಿ. ಒಂದು ಸಣ್ಣ ರಾಜಕೀಯ ಶಕ್ತಿಯಾಗಿದ್ದ ಬಿಜೆಪಿಯನ್ನು ರಾಷ್ಟ್ರೀಯ ಮಟ್ಟದ ಬೃಹತ್ ಶಕ್ತಿಯನ್ನಾಗಿ ಪರಿವರ್ತಿಸುವಲ್ಲಿ ಅಡ್ವಾಣಿ ಅವರ ಸಂಘಟನಾ ಚಾತುರ್ಯ ನಿರ್ಣಾಯಕವಾಗಿತ್ತು. ಹಲವು ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅವರು, ಪಕ್ಷದ ಸಾಂಸ್ಥಿಕ ನೆಲೆ ಬಲಗೊಳ್ಳಲು ದೇಶಾದ್ಯಂತ ಸಂಚರಿಸಿದರು.

Read More
Next Story