ಮಡಿಕೇರಿಯ ಪ್ರವಾಸಿ ತಾಣ ರಾಜಾಸೀಟ್‌ಗೆ 15 ದಿನ ನೋ ಎಂಟ್ರಿ | ರಸ್ತೆ ಕಾಮಗಾರಿಯಿಂದ ಪ್ರವಾಸಿಗರಿಗೆ ನಿರಾಸೆ
ಕೊಡಗಿನ ಮಡಿಕೇರಿಯ ರಾಜಾಸೀಟ್‌ಗೆ 15 ದಿನ ಪ್ರವೇಶ ನಿರ್ಬಂಧಿಸಲಾಗಿದೆ. ರಸ್ತೆ ಅಭಿವೃದ್ಧಿ ಕಾಮಗಾರಿಯಿಂದ ಪ್ರವಾಸಿಗರು, ವ್ಯಾಪಾರಿಗಳಿಗೆ ಸಂಕಷ್ಟ ಎದುರಾಗಿದ್ದು, 11 ಅತ್ತಿ ಮರಗಳ ತೆರವಿಗೂ ವಿರೋಧ ವ್ಯಕ್ತವಾಗಿದೆ.
ಕೊಡಗಿನ ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣ ರಾಜಾಸೀಟ್‌ಗೆ ಮುಂದಿನ 15 ದಿನಗಳ ಕಾಲ ಪ್ರವೇಶ ನಿರ್ಬಂಧಿಸಲಾಗಿದೆ. ಸುಮಾರು 10 ವರ್ಷಗಳ ಬಳಿಕ ರಾಜಾಸೀಟ್ ರಸ್ತೆಯ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಜಿಲ್ಲಾಧಿಕಾರಿ ಕಚೇರಿಯಿಂದ ಕುಂದುರುಮೊಟ್ಟೆ ದೇವಾಲಯದವರೆಗಿನ ಒಂದು ಕಿಲೋಮೀಟರ್ ರಸ್ತೆಯನ್ನು ಕಾಂಕ್ರೀಟ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಹಾಗೂ ರಾಜಾಸೀಟ್ ಪ್ರವೇಶವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಇದರಿಂದ ಪ್ರವಾಸಿಗರಿಗೆ ನಿರಾಸೆಯಾಗಿದ್ದು, ಪ್ರವಾಸಿಗರನ್ನೇ ನಂಬಿಕೊಂಡಿರುವ ಸ್ಥಳೀಯ ವ್ಯಾಪಾರಿಗಳಿಗೂ ನಷ್ಟದ ಆತಂಕ ಎದುರಾಗಿದೆ. ಮತ್ತೊಂದೆಡೆ, ರಸ್ತೆ ಬದಿಯ 11 ಅತ್ತಿ ಮರಗಳನ್ನು ತೆರವುಗೊಳಿಸುವ ಪ್ರಸ್ತಾವನೆಗೆ ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿಯ ಹೆಸರಿನಲ್ಲಿ ಮರಗಳನ್ನು ಕಡಿಯಬಾರದು ಎಂಬುದು ಅವರ ಆಗ್ರಹವಾಗಿದೆ. ಕಾಮಗಾರಿ ಮತ್ತು ಮರಗಳ ತೆರವು ವಿಚಾರ ಈಗ ಚರ್ಚೆಗೆ ಗ್ರಾಸವಾಗಿದೆ.
Next Story

