
ರಾಹುಲ್ ಗಾಂಧಿ ಸಮ್ಮುಖದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಬೆಂಗಳೂರಿನಲ್ಲಿ ರಾಜ್ಯಸಭಾ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಇಂದು ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ
ರಾಹುಲ್ ಗಾಂಧಿ ಸಮ್ಮುಖದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಬೆಂಗಳೂರಿನಲ್ಲಿ ರಾಜ್ಯಸಭಾ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ ಒಟ್ಟು 7 ಅಭ್ಯರ್ಥಿಗಳನ್ನು ಘೋಷಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ಬೆಂಗಳೂರಿನಲ್ಲಿ ತಮ್ಮ ರಾಜ್ಯಸಭಾ ಅಭ್ಯರ್ಥಿ ಸ್ಥಾನಕ್ಕೆ ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ಪ್ರಮುಖ ರಾಜಕೀಯ ವಿದ್ಯಮಾನದ ವೇಳೆ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಖರ್ಗೆ ಅವರಿಗೆ ಸಾಥ್ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂಬರುವ ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ಕಾಂಗ್ರೆಸ್ ಪಕ್ಷವು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮನ್ಸೂರ್ ಅಲಿ ಖಾನ್ ಮತ್ತು ಪಕ್ಷದ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಅವರನ್ನು ಕಣಕ್ಕಿಳಿಸಿದೆ.
ಇನ್ನುಳಿದಂತೆ ಇತರ ರಾಜ್ಯಗಳಲ್ಲೂ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ತಮಿಳುನಾಡಿನಿಂದ ಪ್ರವೀಣ್ ಚಕ್ರವರ್ತಿ ಅವರಿಗೆ ಟಿಕೆಟ್ ನೀಡಲಾಗಿದೆ. ತಮಿಳಗ ವೆಟ್ರಿ ಕಳಗಂ ಪಕ್ಷವು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿರುವ ಸ್ಥಾನಕ್ಕೆ ಇವರನ್ನು ಹೆಸರಿಸಲಾಗಿದೆ.
ಜಾರ್ಖಂಡ್‌ನಿಂದ ಪ್ರಣವ್ ಝಾ, ಮಧ್ಯಪ್ರದೇಶದಿಂದ ಮೀನಾಕ್ಷಿ ನಟರಾಜನ್ ಹಾಗೂ ರಾಜಸ್ಥಾನದಿಂದ ನೀರಜ್ ಡಾಂಗಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮತ್ತೊಮ್ಮೆ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಟ್ಟಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಈ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಕಾಂಗ್ರೆಸ್ ಬಿಡುಗಡೆ ಮಾಡಿರುವ ಒಟ್ಟು ಏಳು ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಗೆ ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್ ಅವರಿಗೆ ಟಿಕೆಟ್ ನೀಡಲಾಗಿದೆ. ಉಳಿದಂತೆ ಮಧ್ಯಪ್ರದೇಶದಿಂದ ಮೀನಾಕ್ಷಿ ನಟರಾಜನ್, ತಮಿಳುನಾಡಿನಿಂದ ಪ್ರವೀಣ್ ಚಕ್ರವರ್ತಿ, ರಾಜಸ್ಥಾನದಿಂದ ನೀರಜ್ ಡಾಂಗಿ ಮತ್ತು ಜಾರ್ಖಂಡ್‌ನಿಂದ ಪ್ರಣವ್ ಝಾ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮನ್ನಣೆ ನೀಡಿದೆ. ತಮ್ಮ ಹೆಸರನ್ನು ಅಧಿಕೃತವಾಗಿ ಘೋಷಿಸುತ್ತಿದ್ದಂತೆಯೇ ಅಭ್ಯರ್ಥಿಗಳೆಲ್ಲರೂ ಪಕ್ಷದ ಉನ್ನತ ನಾಯಕತ್ವಕ್ಕೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಇದೇ ವೇಳೆ ಆಡಳಿತಾರೂಢ ಬಿಜೆಪಿಯು ಸಹ ಐದು ರಾಜ್ಯಗಳ ಒಟ್ಟು 11 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಧ್ಯಪ್ರದೇಶದಿಂದ ತರುಣ್ ಚುಗ್ ಮತ್ತು ರಾಜಸ್ಥಾನದಿಂದ ಸತೀಶ್ ಪೂನಿಯಾ ಅವರಿಗೆ ಅವಕಾಶ ನೀಡಿದೆ. ಆದರೆ ಕೇಂದ್ರ ಸಚಿವರಾದ ರವನೀತ್ ಸಿಂಗ್ ಬಿಟ್ಟು ಮತ್ತು ಜಾರ್ಜ್ ಕುರಿಯನ್ ಅವರ ರಾಜ್ಯಸಭಾ ಅವಧಿ ಜೂನ್ 21ಕ್ಕೆ ಮುಕ್ತಾಯಗೊಳ್ಳುತ್ತಿದ್ದರೂ, ಈ ಬಾರಿ ಬಿಜೆಪಿಯ ಹೊಸ ಪಟ್ಟಿಯಲ್ಲಿ ಅವರಿಗೆ ಮತ್ತೆ ಅವಕಾಶ ಸಿಕ್ಕಿಲ್ಲ. ಒಟ್ಟಾರೆ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಜೂನ್ 8 ಕೊನೆಯ ದಿನವಾಗಿದೆ. ಇದರಿಂದಾಗಿ ರಾಷ್ಟ್ರ ರಾಜಕಾರಣದಲ್ಲಿ ಸದ್ಯ ರಾಜ್ಯಸಭಾ ಚುನಾವಣೆಯ ಕಾವು ತೀವ್ರಗೊಂಡಿದೆ.

