ಮಂಗಳೂರಿನಲ್ಲಿ ಪರೀಕ್ಷೆ ವೇಳಾಪಟ್ಟಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
ದಸರಾ ರಜೆಯಲ್ಲೂ ಪದವಿ ಸೆಮಿಸ್ಟರ್ ಪರೀಕ್ಷೆ ನಡೆಸುವ ನಿರ್ಧಾರ ವಿರೋಧಿಸಿ ಮಂಗಳೂರಿನ ಸೇಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ವೇಳಾಪಟ್ಟಿ ಬದಲಿಸುವಂತೆ ಆಗ್ರಹಿಸಿದ್ದಾರೆ.
ದಸರಾ ರಜೆಯ ಅವಧಿಯಲ್ಲಿ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿರುವುದನ್ನು ವಿರೋಧಿಸಿ ಮಂಗಳೂರಿನ ಸೇಂಟ್ ಆಗ್ನೆಸ್ ಕಾಲೇಜಿನ ಹೊರಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಹಬ್ಬದ ರಜೆಯಲ್ಲೂ ಪರೀಕ್ಷೆ ನಿಗದಿಪಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು, ಪರೀಕ್ಷಾ ವೇಳಾಪಟ್ಟಿಯನ್ನು ಮರುಪರಿಶೀಲಿಸುವಂತೆ ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಯ ದೃಶ್ಯಗಳು ಇಲ್ಲಿವೆ.
Next Story

