ದೊಡ್ಡಬಳ್ಳಾಪುರದಲ್ಲಿ 100 ಹಾಸಿಗೆಗಳ ಇಎಸ್‌ಐಸಿ ಆಸ್ಪತ್ರೆ ಭಾನುವಾರ ಲೋಕಾರ್ಪಣೆ
x

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಡಾ. ಮನ್ಸುಖ್ ಮಾಂಡವೀಯ ಅವರು ಭಾನುವಾರ ದೊಡ್ಡಬಳ್ಳಾಪುರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 100 ಹಾಸಿಗೆಗಳ ಇಎಸ್‌ಐಸಿ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. 

ದೊಡ್ಡಬಳ್ಳಾಪುರದಲ್ಲಿ 100 ಹಾಸಿಗೆಗಳ ಇಎಸ್‌ಐಸಿ ಆಸ್ಪತ್ರೆ ಭಾನುವಾರ ಲೋಕಾರ್ಪಣೆ

ಕಾರ್ಮಿಕರ ರಾಜ್ಯ ವಿಮಾ ಯೋಜನೆ (ESI) ಅಡಿಯಲ್ಲಿ ಈ ಭಾಗದ ಜನರಿಗೆ ಅತ್ಯಾಧುನಿಕ ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ನೂತನ ಆಸ್ಪತ್ರೆಗಳು ಮಹತ್ವದ ಮೈಲಿಗಲ್ಲಾಗಿವೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

Click the Play button to hear this message in audio format

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಡಾ. ಮನ್ಸುಖ್ ಮಾಂಡವೀಯ ಅವರು ಭಾನುವಾರ ದೊಡ್ಡಬಳ್ಳಾಪುರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 100 ಹಾಸಿಗೆಗಳ ಇಎಸ್‌ಐಸಿ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಇದರ ಜೊತೆಗೆ, ಬಳ್ಳಾರಿಯಲ್ಲಿ ನಿರ್ಮಾಣವಾಗಲಿರುವ ಮತ್ತೊಂದು 100 ಹಾಸಿಗೆ ಸಾಮರ್ಥ್ಯದ ನೂತನ ಇಎಸ್‌ಐಸಿ ಆಸ್ಪತ್ರೆಗೂ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಕಾರ್ಮಿಕರ ರಾಜ್ಯ ವಿಮಾ ಯೋಜನೆ (ESI) ಅಡಿಯಲ್ಲಿ ಈ ಭಾಗದ ಜನರಿಗೆ ಅತ್ಯಾಧುನಿಕ ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ನೂತನ ಆಸ್ಪತ್ರೆಗಳು ಮಹತ್ವದ ಮೈಲಿಗಲ್ಲಾಗಿವೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ದೊಡ್ಡಬಳ್ಳಾಪುರ ಇಎಸ್‌ಐಸಿ ಆಸ್ಪತ್ರೆ: 1 ಲಕ್ಷ ಕಾರ್ಮಿಕರಿಗೆ ಅನುಕೂಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಐದು ಎಕರೆ ವಿಶಾಲ ಪ್ರದೇಶದಲ್ಲಿ ಬರೋಬ್ಬರಿ 101 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸುಸಜ್ಜಿತ ಇಎಸ್‌ಐಸಿ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಇದರಿಂದ ಈ ಭಾಗದ ವಿಮೆ ಹೊಂದಿರುವ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಹಾಗೂ ಅವರ ಕುಟುಂಬ ಸದಸ್ಯರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಲಭ್ಯವಾಗಲಿದೆ.

ಬಳ್ಳಾರಿಯಲ್ಲಿ 150 ಕೋಟಿ ರೂ. ವೆಚ್ಚದ ಆಸ್ಪತ್ರೆ

ಇದೇ ವೇಳೆ ಶಂಕುಸ್ಥಾಪನೆಗೊಳ್ಳಲಿರುವ ಬಳ್ಳಾರಿಯ ಉದ್ದೇಶಿತ ಇಎಸ್‌ಐಸಿ ಆಸ್ಪತ್ರೆಯನ್ನು 150 ಕೋಟಿ ರೂಪಾಯಿಗೂ ಅಧಿಕ ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಯೋಜಿಸಲಾಗಿದೆ. ಇಎಸ್‌ಐ ಯೋಜನೆಯ ವ್ಯಾಪ್ತಿಗೆ ಒಳಪಡುವ ವಿಮೆ ಹೊಂದಿರುವ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಈ ಆಸ್ಪತ್ರೆಯ ಮೂಲಕ ಅತ್ಯಾಧುನಿಕ ಹಾಗೂ ಹೈಟೆಕ್ ಆರೋಗ್ಯ ಸೇವೆಗಳನ್ನು ಒದಗಿಸಲು ಉದ್ದೇಶಿಸಲಾಗಿದೆ.

Read More
Next Story