x

ಹೋಂಡಾ ಕಂಪನಿ ಕರ್ನಾಟಕ ಬಿಡುತ್ತೆ ಎಂದ ಎಚ್‌ಡಿಕೆಗೆ ಎಂಬಿ ಪಾಟೀಲ್ ತಿರುಗೇಟು! | MB Patil Slams HD Kumaraswamy

ರಾಜ್ಯದ ಕೈಗಾರಿಕಾ ವಾತಾವರಣಕ್ಕೆ ಧಕ್ಕೆ ತರುವಂತಹ ಹೇಳಿಕೆಗಳನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೀಡುವುದು ಸರಿಯಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ರಾಜ್ಯದ ಕೈಗಾರಿಕಾ ವಾತಾವರಣಕ್ಕೆ ಧಕ್ಕೆ ತರುವಂತಹ ಹೇಳಿಕೆಗಳನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೀಡುವುದು ಸರಿಯಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೋಂಡಾ ಕಂಪನಿಯ ಪ್ರತಿನಿಧಿಗಳು ತಮ್ಮನ್ನು ಭೇಟಿಯಾಗಿ ಕರ್ನಾಟಕ ತೊರೆಯುವುದಾಗಿ ತಿಳಿಸಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಪಾಟೀಲ್, "ಹೋಂಡಾ ಪ್ರತಿನಿಧಿಗಳು ನನ್ನನ್ನು ಭೇಟಿಯಾದಾಗ, ತಾವು ಕುಮಾರಸ್ವಾಮಿ ಅವರನ್ನು ಭೇಟಿಯೇ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ರಾಜ್ಯ ಸರ್ಕಾರ ಹಾಗೂ ಕೈಗಾರಿಕಾ ಇಲಾಖೆಯ ಸಹಕಾರದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ" ಎಂದಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚಿನ ಸಹಕಾರ ತರುವತ್ತ ಕುಮಾರಸ್ವಾಮಿ ಗಮನಹರಿಸಲಿ ಎಂದು ಅವರು ಆಶಿಸಿದ್ದಾರೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

Read More
Next Story